ADVERTISEMENT

ಕೊಪ್ಪಳ: 21ರಂದು ಕರ್ಕಿಹಳ್ಳಿಯಲ್ಲಿ ಮಹಾರಥೋತ್ಸವ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 5:36 IST
Last Updated 16 ಜುಲೈ 2024, 5:36 IST
ಶಿವಚಿದಂಬರೇಶ್ವರ
ಶಿವಚಿದಂಬರೇಶ್ವರ   

ಕೊಪ್ಪಳ: ತಾಲ್ಲೂಕಿನ ಕರ್ಕಿಹಳ್ಳಿಹಲ್ಲಿರುವ ಮೃತ್ಯುಂಜಯೇಶ್ವರ (ಶಿವಚಿದಂಬರೇಶ್ವರ) ಸನ್ನಿಧಾನದಲ್ಲಿ ಜು. 21ರಂದು ಮಧ್ಯಾಹ್ನ 1 ಗಂಟೆಗೆ 21ನೇ ವರ್ಷದ ಮಹಾರಥೋತ್ಸವ ಜರುಗಲಿದೆ.

ಮಹಾರಥೋತ್ಸವದ ಪೂರ್ವಭಾವಿಯಾಗಿ ಭಾನುವಾರದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು ಮಂಗಳವಾರ ಧಾರಣಸರಸ್ವತಿ ಹೋಮ, ಮಹಾಲಕ್ಷ್ಮಿ ಹೋಮ, 17ರಂದು ಆಷಾಢ ಏಕಾದಶಿಯ ಅಂಗವಾಗಿ ಕ್ಷೀರಾಭಿಷೇಕ, ತುಳಸಿ ಆರ್ಚನೆ, ಸತ್ಯನಾರಾಯಣ ವೃತ, ಮಹಾವಿಷ್ಣುಯಾಗ, 18ರಂದು ದತ್ತ ಮೂಲ ಮಂತ್ರದಿಂದ ದತ್ತಾತ್ರೇಯ ಹೋಮ, 19ರಂದು ಸಪ್ತಶತಿ ಪಾರಾಯಣ, ನವಚಂಡಿಹೋಮ ಸಂಜೆ 5 ಗಂಟೆಗೆ ಮೃತ್ಯುಂಜೇಶ್ವರ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಿಗದಿಯಾಗಿವೆ.

20ರಂದು ಬೆಳಿಗ್ಗೆ 11 ಗಂಟೆಗೆ ಉಚ್ಛಾಯ, 21ರಂದು ಅಖಂಡ ವೀಣಾ ಮಂಗಳ, ಮಹಾರಥೋತ್ಸವದ ರಥಾಂಗ ಹೋಮ, ರಥ ಎಳೆಯುವುದು, ಆರತಿ, ನೈವೇದ್ಯ, ಅನ್ನಸಂತರ್ಪಣೆ ಮತ್ತು ಸಂಜೆ ಸಿಡಿಮದ್ದಿನ ಸಂಭ್ರಮ ಇರಲಿದೆ. 22ರಂದು ಮೃತ್ಯುಂಜಯೇಶ್ವರನಿಗೆ ಅಭಿಷೇಕ, ಬುತ್ತಿಪೂಜೆ, ಅವಭೃತ ಸ್ವಾನ, ಮಹಾನೈವೇದ್ಯ ನಡೆಯಲಿದೆ. ಈ ಕಾರ್ಯಕ್ರಮಗಳಲ್ಲಿ ಜಿಲ್ಲೆ ಮತ್ತು ಹೊರಜಿಲ್ಲೆಗಳ ಸ್ವಾಮೀಜಿಗಳು, ಜನಪ್ರತಿನಿಧಿಗಳು ಪಾಲ್ಗೊಳ್ಳುವರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.