ಯಲಬುರ್ಗಾ: ತಾಲ್ಲೂಕಿನ ವಜ್ರಬಂಡಿ ಗ್ರಾಮದ ಹೊರವಲಯದಲ್ಲಿರುವ ಗುಡ್ಡದ ಮಳೆಮಲ್ಲೇಶ್ವರ ದೇವರ ಜಾತ್ರೆ ಅದ್ದೂರಿಯಾಗಿ ನೆರವೇರಿತು. ಪ್ರಯುಕ್ತ ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಜಾತ್ರೆಯ ಅಂಗವಾಗಿ ಗ್ರಾಮೀಣ ಯುವಕರಿಗೆ ಮುಂಗೈ ಕುಸ್ತಿ, ಕಬಡ್ಡಿ ಸೇರಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಜಾತ್ರೋತ್ಸವ ಸಮಿತಿಯವರು ಬಹುಮಾನ ವಿತರಿಸಿ ಪ್ರೋತ್ಸಾಹಿಸಿದರು.
ಲಿಂಗನಬಂಡಿ ಮೌನೇಶ್ವರಮಠದ ಉಳಿವೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಲಘು ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ವಜ್ರಬಂಡಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.