ADVERTISEMENT

ಸಾಮೂಹಿಕ ವಿವಾಹ ಜೀವನದ ಆದರ್ಶ: ಅರವಿಂದಗೌಡ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 5:41 IST
Last Updated 22 ಆಗಸ್ಟ್ 2025, 5:41 IST
ಕುಕನೂರಿನ ಅನ್ನದಾನಿಶ್ವರಮಠದಲ್ಲಿ ಸಾಮೂಹಿಕ ವಿವಾಹ ಜರುಗಿದವು
ಕುಕನೂರಿನ ಅನ್ನದಾನಿಶ್ವರಮಠದಲ್ಲಿ ಸಾಮೂಹಿಕ ವಿವಾಹ ಜರುಗಿದವು   

ಕುಕನೂರು: ‘ಸಾಮೂಹಿಕ ವಿವಾಹಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕುದುವುದಲ್ಲದೆ, ನೆಮ್ಮದಿ ಜೀವನಕ್ಕೆ ನಾಂದಿ ಹಾಡುತ್ತವೆ’ ಎಂದು ಯುವಮುಖಂಡ ಅರವಿಂದಗೌಡ ಪಾಟೀಲ್ ಹೇಳಿದರು.

ಇಲ್ಲಿನ ಅನ್ನದಾನಿಶ್ವರ ಶಾಖಾಮಠದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಅವರು ಮಾತನಾಡಿದರು.

‘ವಧು–ವರರು ದಾಂಪತ್ಯ ಜೀವನವನ್ನು ಮಾದರಿಯಾಗಿ ನಡೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು’ ಎಂದರು.

ADVERTISEMENT

‘ಇಂದಿನ ದಿನಮಾನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮದುವೆ ಕಬ್ಬಿಣದ ಕಡಲೆ ಇದ್ದಂತೆ. ಉಳ್ಳವರು ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಿ ಬಡವ, ಶ್ರೀಮಂತ, ಮೇಲು, ಕೀಳು ಎನ್ನದೆ ಎಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ನಡೆಸುವ ಎಲ್ಲ ಸತ್ಕಾರ್ಯ ಮಾಡಬೇಕು. ಇಂತಹ ಸಾಮಾಜಿಕ ಕಳಕಳಿಯೊಂದಿಗೆ ಸಮಿತಿಯವರು ನಡೆಸುವ ಸಾಮೂಹಿಕ ವಿವಾಹ ಮಹೋತ್ಸವಗಳು ನಿಜಕ್ಕೂ ಶ್ಲಾಘನೀಯ’ ಎಂದರು.

ಕಂಪ್ಲಿಯ ಅಭಿನವ ಪ್ರಭುಸ್ವಾಮೀಜಿ, ಗುರುಶಾಂತ ಶಿವಾಚಾರ್ಯ ಸ್ವಾಮೀಜಿ, ಮಹಾದೇವ ಸ್ವಾಮೀಜಿ, ಈರಪ್ಪ ಗುತ್ತಿ, ಕಳಕಪ್ಪ ಕಂಬಳಿ, ಕಾಸಿಂ ಸಾಬ್ ತಳಕಲ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಪ್ರಶಾಂತ ಆರಬೆರಳಿನ, ಕರಿಬಸಯ್ಯ ಬಿನ್ನಾಳ, ವೀರಯ್ಯ, ಎಚ್‍.ಡಿ.ಪಾಟೀಲ, ರಥಶಿಲ್ಪಿ ಶರಣಕುಮಾರ ವಿಶ್ವಕರ್ಮ, ಕಲ್ಲಪ್ಪ ಬೋವಿ, ರವಿ ಗದಗ್ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.