ADVERTISEMENT

ಕೊಪ್ಪಳ: ‘ಎಕ್ಸಾಂ ಮಾಸ್ಟರ್ ಮೈಂಡ್’ಪತ್ರಿಕೆ ಬಿಡುಗಡೆ ಇಂದು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 3:43 IST
Last Updated 28 ಸೆಪ್ಟೆಂಬರ್ 2021, 3:43 IST
ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ
ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ   

ಕೊಪ್ಪಳ: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳು ಹೊರ ತಂದಿರುವ ‘ಎಕ್ಸಾಂ ಮಾಸ್ಟರ್ ಮೈಂಡ್’ ಇಂಗ್ಲಿಷ್‌–ಕನ್ನಡ ದ್ವಿಭಾಷಾ ಆನ್‌ಲೈನ್‌ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಮಂಗಳವಾರ (ಸೆ.28) ಬೆಳಿಗ್ಗೆ 11ಕ್ಕೆ ಇಲ್ಲಿನಶ್ರೀ ಗವಿಸಿದ್ಧೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಶ್ರೀಗವಿಸಿದ್ಧೇಶ್ವರ ಡಿಜಿಟಲ್ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ.

ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಪತ್ರಿಕೆ ಬಿಡುಗಡೆ ಮಾಡುವರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಮಾರುತಿ.ಎಂ.ಪಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾಲೇಜಿನ ಪ್ರಾಚಾರ್ಯ ಡಾ.ಚನ್ನಬಸವ ಅವರು ಅಧ್ಯಕ್ಷತೆ ವಹಿಸುವರು.ಯುಪಿಎಸ್‌ಸಿ, ಕೆಪಿಎಸ್‌ಸಿ, ಪಿಎಸ್‌ಐ, ಎಫ್‌ಡಿಎ, ಬ್ಯಾಂಕಿಂಗ್‌ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಇದು ಸಹಕಾರಿಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT