ADVERTISEMENT

ಮತ್ಸ್ಯ ಸಂಜೀವಿನಿ ಯೋಜನೆ ಸಹಕಾರಿ: ನೇಗಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 7:31 IST
Last Updated 26 ಜುಲೈ 2025, 7:31 IST
ಕೊಪ್ಪಳದಲ್ಲಿ ಶುಕ್ರವಾರ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು
ಕೊಪ್ಪಳದಲ್ಲಿ ಶುಕ್ರವಾರ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು   

ಕೊಪ್ಪಳ: ‘ಮೀನು ಕೃಷಿ ಕೈಗೊಳ್ಳಲು ಮತ್ಸ್ಯ ಸಂಜೀವಿನಿ ಯೋಜನೆಯು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಆರ್ಥಿಕ ಬಲವರ್ಧನೆಗಾಗಿ ಸಹಕಾರಿಯಾಗಲಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್‌ ನೇಗಿ ಹೇಳಿದರು.

ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಹಾಗೂ ಮೀನುಗಾರಿಕೆ ಇಲಾಖೆಗಳ ಸಹಯೋಗದಲ್ಲಿ ನಡೆದ ಮತ್ಸ್ಯ ಸಂಜೀವಿನಿ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ‘ಮತ್ಸ್ಯಸಂಜೀವಿನಿ ರಾಜ್ಯದಲ್ಲಿ ಹೊಸ ಪ್ರಯೋಗವಾಗಿದ್ದು, ಈ ಯೋಜನೆಯಡಿಯಲ್ಲಿ ಕೆಲ ಜಿಲ್ಲೆಗಳಲ್ಲಿ ಹೆಚ್ಚು ಸಮಯದವರೆಗೆ ನೀರಿರುವಂತಹ ಕೆರೆಗಳಲ್ಲಿ ಈಗಾಗಲೇ ಕೈಗೊಂಡಿರುವ ಮೀನು ಕೃಷಿಯು ಯಶಸ್ವಿಯಾಗಿದೆ. ಮೀನುಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಎನ್.ಆರ್.ಎಲ್.ಎಂ. ವತಿಯಿಂದ ಅನುಷ್ಠಾನ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ವಿಜಯನಗರ ಜಿಲ್ಲೆಯ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಮಲ್ಲೇಶ ನಾಯಕ, ಜಿ.ಪಂ. ಯೋಜನಾ ನಿರ್ದೇಶಕ ಪ್ರಕಾಶ ವಿ., ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಕೊಪ್ಪಳ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಕುಲಕರ್ಣಿ, ಸಹಾಯಕ ನಿರ್ದೇಶಕ ಬಸವರಾಜ ಪಾಟೀಲ್, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. 

ADVERTISEMENT
ವರ್ಣಿತ್‌ ನೇಗಿ
ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಕೆರೆಗಳಲ್ಲಿ ಮೀನು ಮರಿಗಳನ್ನು ಬಿಟ್ಟು ಅವುಗಳ ಪಾಲನೆ ಮತ್ತು ಮಾರಾಟ ಮಾಡಿದರೆ ಲಾಭ ಪಡೆದುಕೊಳ್ಳಬಹುದು. ಅದಕ್ಕಾಗಿಯೇ ಕಾರ್ಯಾಗಾರ ನಡೆದಿದೆ
ವರ್ಣಿತ್‌ ನೇಗಿ ಜಿ.ಪಂ ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.