ADVERTISEMENT

ಆರೋಗ್ಯ ಇಲಾಖೆಯ 20 ಗುತ್ತಿಗೆ ನೌಕರರ ವಜಾ

ಸತತ 12 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಸಿಬ್ಬಂದಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 18:51 IST
Last Updated 5 ಅಕ್ಟೋಬರ್ 2020, 18:51 IST
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಸೋಮವಾರ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಸೋಮವಾರ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಕೊಪ್ಪಳ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 12 ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಆರೋಗ್ಯ ಇಲಾಖೆಯ 20 ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸೋಮವಾರ ಆದೇಶ ಹೊರಡಿಸಿದ್ದಾರೆ.

ಗುತ್ತಿಗೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ವಿಶ್ವಾರಾಧ್ಯ ಯಮೋಜಿ ನೇತೃತ್ವದಲ್ಲಿ ನೌಕರರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ಕೈಬಿಟ್ಟು ಕೋವಿಡ್‌ ಕೆಲಸಕ್ಕೆ ಹಾಜರಾಗುವಂತೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಮನವಿ ಮಾಡಿದ್ದರು.

ಕರ್ತವ್ಯಲೋಪ, ಅನಧಿಕೃತ ಗೈರು, ಅಸಹಕಾರ, ನೇಮಕಾತಿ ನಿಯಮ ಮತ್ತು ಷರತ್ತು ಉಲ್ಲಂಘನೆ ಮಾಡಿದ್ದಾರೆ ಎನ್ನುವ ಕಾರಣಗಳನ್ನು ನೀಡಿ ನೌಕರರನ್ನು ವಜಾಗೊಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.