ಪ್ರಜಾವಾಣಿ ವಾರ್ತೆ
ಯಲಬುರ್ಗಾ: ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯ ಇಲಾಖೆ, ಕೆಎಚ್‍ಪಿಟಿ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ಇವುಗಳ ಸಹಯೋಗದಲ್ಲಿ ವಿಶ್ವ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಯಿತು.
ಸಮುದಾಯ ಆರೊಗ್ಯಾಧಿಕಾರಿ ಶ್ರೀದೇವಿ ಮಾತನಾಡಿ, ಮುಟ್ಟಿನ ಚಕ್ರ ಹಾಗೂ ಪೌಷ್ಟಿಕ ಆಹಾರ ಸೇವನೆ ಕುರಿತು ಸಮಗ್ರ ಮಾಹಿತಿ ನೀಡಿದರು. ಸ್ನೇಹ ಕ್ಲಿನಿಕ್ ಆಪ್ತ ಸಮಾಲೋಚಕ ಶರಣಪ್ಪ ಉಪ್ಪಾರ ದಿನಾಚರಣೆ ಕುರಿತು ಮಾತನಾಡಿದರು. ಗ್ರಾ.ಪಂ. ಅಧ್ಯಕ್ಷೆ ರೇಣುಕಾ ಕವಳಕೇರಿ ಚಾಲನೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪಿಡಿಒ ರೇಣುಕಾ ಟಂಕದ್ ಮಾತನಾಡಿದರು.
ಕೆಎಚ್‍ಪಿಟಿ ಸಂಸ್ಥೆಯ ಕ್ಷೇತ್ರ ಸಮನ್ವಯಾಧಿಕಾರಿ ಮಹಾಂತೇಶ್, ಅಂಗನವಾಡಿ ಮೇಲ್ವಿಚಾರಕಿ ಸವಿತಾ ಆರೇರ್, ಗ್ರಾ.ಪಂ ಮಾಜಿ ಅಧ್ಯಕ್ಷ ಕಲ್ಲಪ್ಪ ಕವಳಿಕೇರಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.