ADVERTISEMENT

ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 11:12 IST
Last Updated 6 ಅಕ್ಟೋಬರ್ 2020, 11:12 IST
ಗಂಗಾವತಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಂಗಳವಾರ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ ನೀಡಲಾಯಿತು
ಗಂಗಾವತಿ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಂಗಳವಾರ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ ನೀಡಲಾಯಿತು   

ಗಂಗಾವತಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ 2021-22 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ರೈತರು, ಸಾರ್ವಜನಿಕರು ತಮಗೆ ಅವಶ್ಯವಿರುವ ವೈಯಕ್ತಿಕ ಕಾಮಗಾರಿ ಬೇಡಿಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತ ಇಒ ಡಾ.ಡಿ.ಮೋಹನ್‌ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಮಂಗಳವಾರ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಉದ್ಯೋಗ ವಾಹಿನಿ ರಥ ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳಿಗೂ ಸಂಚರಿಸಲಿದೆ. ಸಾರ್ವಜನಿಕರಿಗೆ, ರೈತರಿಗೆ ಉದ್ಯೋಗ ಖಾತ್ರಿ ಯೋಜನೆಯ ಕುರಿತು ಮಾಹಿತಿ ನೀಡಲಿದೆ. ಸಾರ್ವಜನಿಕರುಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ADVERTISEMENT

ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿ ಬೇಡಿಕೆಯ ಪಟ್ಟಿಯನ್ನು ಇಡಲಾಗುತ್ತಿದೆ. ಮುಂದಿನ ಒಂದು ತಿಂಗಳುಗಳ ಕಾಲ ಈ ಪೆಟ್ಟಿಗೆಯನ್ನು ಪಂಚಾಯಿತಿಗಳಲ್ಲಿ ಇಡಲಾಗುವುದು. ಈ ಪೆಟ್ಟಿಗೆಯಲ್ಲಿ ಗ್ರಾಮಸ್ಥರು ತಮಗೆ ಬೇಕಾದ ಕಾಮಗಾರಿಯ ಪಟ್ಟಿಯನ್ನು ಚೀಟಿಯಲ್ಲಿ ಬರೆದು ಹಾಕಬೇಕು. ಕೊನೆಗೆ ಪೆಟ್ಟಿಗೆಯಲ್ಲಿ ಬಂದ ಚೀಟಿಗಳನ್ನು ಆಧರಿಸಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಿಯಾ ಯೋಜನೆ ತಯಾರಿಸಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಎಇಇ ಶಿವರಾಜಕುಮಾರ ನಾಯಕ, ಕನಕಗಿರಿ ತಹಶೀಲ್ದಾರ್‌ ರವಿ ಅಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ತಾ.ಪಂ.ವ್ಯವಸ್ಥಾಪಕಿ ಉಷಾರಾಣಿ ಹಾಗೂ ಪಲ್ಲವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.