ADVERTISEMENT

ಅಂಜನಾದ್ರಿಗೆ ಮೂಲಸೌಕರ್ಯ ಒದಗಿಸಲು ಸೂಚನೆ

ಕುಟುಂಬ ಸಮೇತರಾಗಿ ಬಂದು ಆಂಜನೇಯ ಸ್ವಾಮಿ ದರ್ಶನ ಪಡೆದ ಸಚಿವ ಕೆ.ಎಸ್.ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2021, 3:56 IST
Last Updated 2 ಮಾರ್ಚ್ 2021, 3:56 IST
ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು
ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು   

ಅಂಜನಾದ್ರಿ (ಗಂಗಾವತಿ): ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಸುತ್ತಮುತ್ತ ಮೂಲ ಸೌಕರ್ಯ ಒದಗಿಸಿ ಎಂದು ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಸೂಚಿಸಿದರು.

ಅಂಜನಾದ್ರಿ ಪರ್ವತಕ್ಕೆ ಸೋಮವಾರ ಕುಟುಂಬ ಸಮೇತರಾಗಿ ಭೇಟಿ ನೀಡಿದ ಅವರು ಆಂಜನೇಯ ಸ್ವಾಮಿ ದರ್ಶನ
ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ,‘ಅಂಜನಾದ್ರಿ ಸುತ್ತಮುತ್ತ ಇರುವ ಜನರಿಗೆ ವಿದ್ಯುತ್‌, ಶೌಚಾಲಯ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳ ಕುರಿತು ಪರಿಶೀಲನೆ ಮಾಡಿದ್ದೇವೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಕೂಡಲೇ ಎಲ್ಲ ಸೌಲಭ್ಯಗಳನ್ನು ಒದಗಿಸಲು ಉನ್ನತ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

ADVERTISEMENT

ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಜಿ.ಪಂ. ಸಿಇಒ ರಘುನಂದನ ಮೂರ್ತಿ, ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ನೇಮಿರಾಜನಾಯ್ಕ, ಪ್ರಮುಖರಾದ ಎಚ್‌.ಗಿರೇಗೌಡ, ಯಮನಪ್ಪ ವಿಠಲಾಪುರ, ಸಣ್ಣಕ್ಕಿ ನೀಲಪ್ಪ, ರಾಜೇಶ್ವರಿ, ಸಿದ್ದರಾಮಸ್ವಾಮಿ, ಸಂತೋಷ ಕೆಲೋಜಿ, ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ತಹಶೀಲ್ದಾರ್‌ ಎಂ.ರೇಣುಕಾ ಹಾಗೂ ತಾಲ್ಲೂಕು ಪಂಚಾಯಿತಿ ಇಒ ಡಾ.ಡಿ.ಮೋಹನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.