ಕೊಪ್ಪಳ: ಸದಾಶಿವ ಆಯೋಗದ ವರದಿ ಜಾರಿ ಮಾಡಲು ಬಿಡುವುದಿಲ್ಲ ಎಂಬ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹೇಳಿಕೆ ವಿರೋಧಿಸಿ ಮಾದಿಗ ಸಮಾಜದ ವಿವಿಧ ಸಂಘಟನೆಗಳ ಮುಖಂಡರು ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ಸಚಿವರು ಜಿಲ್ಲಾಡಳಿತ ಭವನದಲ್ಲಿ ನಡೆಯುವ ಸಭೆಗೆ ಬಂದಾಗ ಬಾಗಿಲಲ್ಲಿಯೇ ತಡೆದು ಮುತ್ತಿಗೆ ಹಾಕಲು ಯತ್ನಿಸಿದರು.
ಪ್ರತಿಭಟನಾಕರರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದುಕೊಂಡು ಹೋದರು. ಮಾದಿಗ ಮಹಾಸಭಾದ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.