ಬಂಧನ
(ಪ್ರಾತಿನಿಧಿಕ ಚಿತ್ರ)
ಯಲಬುರ್ಗಾ: ತಾಲ್ಲೂಕಿನ ಗ್ರಾಮ ವೊಂದರ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದ್ದರಿಂದ ಆಕೆ ಗರ್ಭಿಣಿಯಾಗಿದ್ದು, ಈ ಸಂಬಂಧ ಯುವಕನೊಬ್ಬನನ್ನು ಬಂಧಿಸಲಾಗಿದೆ.
‘ಮಗಳ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಗೋಕಾಕ ತಾಲ್ಲೂಕಿನ ನಾಗನೂರು ಗ್ರಾಮದ ಯುವನ್ ತಳಗಡೆ (19) ವಿರುದ್ಧ ದೂರು ನೀಡಿದ್ದರು. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಯುವಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಯಲಬುರ್ಗಾ ಠಾಣೆಯ ಸಿಪಿಐ ಮೌನೇಶಗೌಡ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಜಾಗೃತಿ ಮೂಡಿಸಲು ಕ್ರಮ: ‘ಬಾಲ್ಯವಿವಾಹ ಮತ್ತು ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚುತ್ತಿರುವುದು ಸವಾಲಾಗಿದೆ. ಪ್ರೀತಿ–ಪ್ರೇಮದ ಹೆಸರಿನಲ್ಲಿ ಮಕ್ಕಳು ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವುದು ಬೇಸರದ ಸಂಗತಿ. ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗಳಲ್ಲಿ ಈ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವುದು ಅಗತ್ಯವಿದ್ದು, ಸಂಬಂಧಪಟ್ಟವರಿಗೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ’ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.