ರಾಘವೇಂದ್ರ ಹಿಟ್ನಾಳ
ಕೊಪ್ಪಳ: ’ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ನಾನು ಹೇಳಿಲ್ಲ’ ಎಂದು ಕೊಪ್ಪಳದ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ಸೋಮವಾರ ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ಹೇಳಿದ ಮಾತಿನಲ್ಲಿ ಬೇರೆಯೇ ಅರ್ಥವಿದೆ. ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಮೊತ್ತದ ಹಣ ನೀಡುತ್ತಿದ್ದೇವೆ. ಆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುತ್ತಿದ್ದೇವೆ. ನಾನು ಏನು ಎನ್ನುವುದು ನಮ್ಮ ಜನರಿಗೆ, ಪಕ್ಷದ ಮುಖಂಡರಿಗೆ ಗೊತ್ತಿದೆ’ ಎಂದು ಸಮರ್ಥಿಸಿಕೊಂಡರು.
ಭಾನುವಾರ ತಾಲ್ಲೂಕಿನ ಕುಣಿಕೇರಿಯಲ್ಲಿ ಅಂಚೆ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಕಾರ್ಯಕ್ರಮದಲ್ಲಿ ಅವರು ‘ಸರ್ಕಾರ ಗ್ಯಾರಂಟಿ ಯೋಜನೆಗೆ ₹54 ಸಾವಿರ ಕೋಟಿ ನೀಡಿರುವ ಕಾರಣ ಅಭಿವೃದ್ಧಿ ಸ್ವಲ್ಪ ಕುಂಠಿತವಾಗಿದೆ’ ಎಂದಿದ್ದರು. ಅವರ ಹೇಳಿಕೆಯ ವಿಡಿಯೊ ಕೂಡ ವೈರಲ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.