ADVERTISEMENT

ಭೂಮಿ ಮಂಜೂರಿಗೆ ಸಚಿವರಿಗೆ ಮನವಿ

ತಾವರಗೇರಾ ಪಟ್ಟಣದ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಅನುದಾನ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 12:56 IST
Last Updated 22 ಫೆಬ್ರುವರಿ 2021, 12:56 IST
ತಾವರಗೇರಾ ಪಟ್ಟಣದಲ್ಲಿ ಕುಡಿಯುವ ನೀರಿನ ಯೋಜನೆಗೆ ಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಶಾಸಕ ಅಮರೇಗೌಡ ಬಯ್ಯಾಪುರ ಸಚಿವ ಮಾಧುಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು
ತಾವರಗೇರಾ ಪಟ್ಟಣದಲ್ಲಿ ಕುಡಿಯುವ ನೀರಿನ ಯೋಜನೆಗೆ ಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಶಾಸಕ ಅಮರೇಗೌಡ ಬಯ್ಯಾಪುರ ಸಚಿವ ಮಾಧುಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು   

ತಾವರಗೇರಾ: ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಇಲ್ಲಿನ ಪುರ ಕೆರೆ ಬಳಿ 100 ಎಕರೆ ಭೂಮಿ ಮಂಜೂರು ಮಾಡಬೇಕು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಶಾಸಕ ಅಮರೇಗೌಡ ಬಯ್ಯಾಪುರ ಹಾಗೂ ಜನಪ್ರತಿಧಿಗಳು ಸೋಮವಾರ ಮನವಿ ಸಲ್ಲಿಸಿದರು.

ಖಾಸಗಿ ಕಾರ್ಯಕ್ರಮಕ್ಕೆ ಪಟ್ಟಣದ ಮೂಲಕ ಲಿಂಗಸುಗೂರಿಗೆ ತೆರಳುತ್ತಿದ್ದ ವೇಳೆ ಪಟ್ಟಣದ ಪ್ರವಾಸಿ ಮಂದಿರದ ಬಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರು, ಸಾರ್ವಜನಿಕರು ಸಚಿವರನ್ನು ಸ್ವಾಗತಿಸಿದರು.

ಶಾಸಕ ಅಮರೇಗೌಡ ಬಯ್ಯಾಪೂರ,‘ಶಾಶ್ವತ ಕುಡಿಯುವ ನೀರು ಒದಗಿಸಬೇಕು ಎನ್ನುವುದು ಪಟ್ಟಣದ ನಿವಾಸಿಗಳ ಬಹುದಿನದ ಬೇಡಿಕೆ. ತುರುವಿಹಾಳ ಎಡದಂಡೆ ಕಾಲುವೆ ಮೂಲಕ ಪಟ್ಟಣಕ್ಕೆ ನೀರು ಒದಗಿಸುವ ಈ ಯೋಜನೆಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆದ್ದರಿಂದ ಪುರ ಕೆರೆ ಬಳಿ ಭೂಮಿ ಮಂಜೂರು ಮಾಡಿಸಿಕೊಡಬೇಕು’ ಎಂದು ಮನವಿ ಮಾಡಿದರು.

ADVERTISEMENT

ಮನವಿ ಸ್ವೀಕರಿಸಿದ ಸಚಿವ ಮಾಧುಸ್ವಾಮಿ,‘ಕೆರೆ ಜಾಗ ಪರಿಶೀಲಿಸಿ ಅನುಮೋದನೆ ನೀಡಲಾಗುವುದು’ ಎಂದು ಭರವಸೆ ನೀಡಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಕ್ರಮ್ ರಾಯ್ಕರ್, ಸದಸ್ಯರಾದ ನಾರಾಯಣಗೌಡ ಮೆದಿಕೇರಿ, ಅಂಬಣ್ಣ ಕಂದಗಲ್ಲ, ವೀರೇಶ ಭೋವಿ, ಅಯ್ಯೂಬ್ ಖಾನ್ ಪಠಾಣ್, ಉದ್ಯಮಿ ಬಸನಗೌಡ ಮಾಲಿ ಪಾಟೀಲ, ತಾ.ಪಂ. ಮಾಜಿ ಅಧ್ಯಕ್ಷ ದುರಗೇಶ ನಾರಿನಾಳ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ರುದ್ರಗೌಡ ಕುಲಕರ್ಣಿ, ವಿರೇಶ ತಾಳಿಕೋಟಿ, ಲಿಂಗರಾಜ ಹಂಚಿನಾಳ, ಅಮರೇಶ ಗಾಂಜಿ, ಅಮರೇಶ ಕುಂಬಾರ, ರಂಗಪ್ಪ, ಮಂಜುನಾಥ ಮತ್ತು ಸ್ಥಳೀಯ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.