ADVERTISEMENT

8ರಂದು ಬಹಿರಂಗ ಪ್ರಚಾರ ಅಂತ್ಯ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 6:26 IST
Last Updated 7 ಡಿಸೆಂಬರ್ 2021, 6:26 IST

ಕೊಪ್ಪಳ: ವಿಧಾನ ಪರಿಷತ್ ಚುನಾವಣೆ (ಸ್ಥಳೀಯ ಸಂಸ್ಥೆಗಳು) ಬಹಿರಂಗ ಪ್ರಚಾರ ಡಿ.8ರಂದು ಅಂತ್ಯವಾಗಲಿದೆ.

ಅಂದು ಸಂಜೆ 6ರಿಂದ ಡಿ.10ರ ಮಧ್ಯರಾತ್ರಿ 12ರವರೆಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಆದೇಶ ಹೊರಡಿಸಿದ್ದಾರೆ.

ಡಿ.10 ರಂದು ಚುನಾವಣೆ ನಡೆಯಲಿದೆ. 5ಕ್ಕಿಂತ ಹೆಚ್ಚು ಜನ ಅನಧಿಕೃತವಾಗಿ ಗುಂಪು ಸೇರಬಾರದು ಮತ್ತು ಬಹಿರಂಗ ಸಭೆಗಳನ್ನು ನಡೆಸುವಂತಿಲ್ಲ. ಜಿಲ್ಲೆಯಲ್ಲಿ ಮತದಾನ ನಡೆಯುವ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಪ್ರದೇಶದ ಮತದಾನ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ಜಾತ್ರೆ, ಉತ್ಸವ, ಸಂತೆ ಮುಂದೂಡಿಕೆ:ಡಿ.10 ರಂದು ಜಿಲ್ಲೆಯಲ್ಲಿ ನಡೆಯುವ ಜಾತ್ರೆ, ದನಗಳ ಸಂತೆ, ಉತ್ಸವ ಮತ್ತು ಉರುಸ್ಮುಂದೂಡಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.