ADVERTISEMENT

ಆಧುನಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕ ಆರಂಭ

ವೈದ್ಯಕೀಯ ಘನತ್ಯಾಜ್ಯ ಸಾಗಾಣಿಕಾ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2018, 11:19 IST
Last Updated 4 ಜುಲೈ 2018, 11:19 IST
ಆಸ್ಪತ್ರೆಗಳ ವೈದ್ಯಕೀಯ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಶೇಷ ವಾಹನಗಳಿಗೆ ಜಿಲ್ಲಾಧಿಕಾರಿ ಕನಗವಲ್ಲಿ ಅವರು ಮಂಗಳವಾರ ಕೊಪ್ಪಳದ ಜಿಲ್ಲಾಡಳಿತ ಭವನದಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ರಾಮಕೃಷ್ಣ, ಶಿವಬಸವನಗೌಡ, ಶರಣಪ್ಪ ಇದ್ದರು
ಆಸ್ಪತ್ರೆಗಳ ವೈದ್ಯಕೀಯ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಶೇಷ ವಾಹನಗಳಿಗೆ ಜಿಲ್ಲಾಧಿಕಾರಿ ಕನಗವಲ್ಲಿ ಅವರು ಮಂಗಳವಾರ ಕೊಪ್ಪಳದ ಜಿಲ್ಲಾಡಳಿತ ಭವನದಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ರಾಮಕೃಷ್ಣ, ಶಿವಬಸವನಗೌಡ, ಶರಣಪ್ಪ ಇದ್ದರು   

ಕೊಪ್ಪಳ: ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ, ಸಾಗಿಸಿ, ಸುಟ್ಟು ನಾಶಪಡಿಸುವಜಿಲ್ಲೆಯ ಮೊದಲ ತ್ಯಾಜ್ಯ ಸಂಸ್ಕರಣಾ ಘಟಕ ಹಾಗೂ ಸಂಗ್ರಹಿಸುವ ವಾಹನಗಳಿಗೆಜಿಲ್ಲಾಧಿಕಾರಿ ಎಂ.ಕನಗವಲ್ಲಿ ಮಂಗಳವಾರ ಇಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

'ಬಹಳ ವರ್ಷಗಳಿಂದ ಬೇಡಿಕೆಯಲ್ಲಿದ್ದ ಆಧುನಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕ ಬೂದಗುಂಪಾ ಬಳಿಯ ನಾಗೇಶನಹಳ್ಳಿಯಲ್ಲಿ ಸ್ಥಾಪನೆಯಾಗಿದೆ. ಜಿಲ್ಲೆಯಲ್ಲಿರುವ ಸುಮಾರು 480 ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ತ್ಯಾಜ್ಯವನ್ನು ಈ ಎರಡು ವಾಹನಗಳು ನಿತ್ಯ ಆಸ್ಪತ್ರೆಯಿಂದಲೇ ಸಂಗ್ರಹಿಸಲಿವೆ' ಎಂದು ಅವರು ಹೇಳಿದರು.

ಘಟಕದ ಮಾಲೀಕ ಶಿವಬಸವನಗೌಡ ಬೇವಿನಹಾಳ ಮಾತನಾಡಿ, ತ್ಯಾಜ್ಯ ಸಂಗ್ರಹಕ್ಕೆಂದೇ ಈ ವಾಹನಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಪ್ರತಿಯೊಂದು ಆಸ್ಪತ್ರೆಯಿಂದ ನಿತ್ಯ ಸಂಗ್ರಹಿಸುವ ತ್ಯಾಜ್ಯವನ್ನು ನಾಗೇಶನಹಳ್ಳಿಯ ಆಧುನಿಕ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತದೆ. ಅಲ್ಲಿ ಅವನ್ನು ವೈಜ್ಞಾನಿಕವಾಗಿ ಸುಟ್ಟು ನಾಶಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಡಿಎಚ್‍ಒ ಅವರಿಗೆ ವಿವರಿಸಿದರು.

ADVERTISEMENT

ಪ್ರತಿಯೊಂದು ಆಸ್ಪತ್ರೆಯೂ ಕಡ್ಡಾಯವಾಗಿ ತ್ಯಾಜ್ಯವನ್ನು ಸಂಗ್ರಹಿಸಿ, ಘಟಕದಲ್ಲಿ ವಿಲೇವಾರಿಗೊಳಿಸಲು ಒಪ್ಪಿಸಬೇಕಾಗುತ್ತದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶವನ್ನೂ ಹೊರಡಿಸಿದ್ದು, ಜಿಲ್ಲಾ ಆರೋಗ್ಯಾಧಿಕಾರಿಗಳು ಆಸ್ಪತ್ರೆಗಳಿಗೆ ಈ ಕುರಿತು ಸೂಚನೆಯನ್ನೂ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಘಟಕವನ್ನು ನಾಗೇಶನಹಳ್ಳಿಯಿಂದ ಎರಡು ಕಿಮೀ ದೂರದಲ್ಲಿ, ಎರಡು ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ. ಸರ್ಕಾರದ ವಿವಿಧ ಇಲಾಖೆಗಳ ಮಾನದಂಡಗಳ ಪ್ರಕಾರ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕವನ್ನು ಸ್ಥಾಪಿಸಲಾಗಿದ್ದು, ಇನ್ಮುಂದೆ ಆಸ್ಪತ್ರೆಗಳು ತಮ್ಮಲ್ಲಿ ಉತ್ಪತ್ತಿಯಾಗುವ ಮಾರಕ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಅವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತಿಲ್ಲ ಎಂದು ಶಿವಬಸವನಗೌಡ ಸ್ಪಷ್ಪಪಡಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ, ವಿಲೇವಾರಿ ಘಟಕದ ಸ್ಥಾಪಕ ವಕೀಲ ಶರಣಪ್ಪ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.