ADVERTISEMENT

‘ಪ್ರಜಾಪ್ರಭುತ್ವ ಮೌಲ್ಯ ಎತ್ತಿಹಿಡಿದ ಮೋದಿ’

ನರೇಂದ್ರ ಮೋದಿ ಪ್ರಧಾನಿಯಾಗಿ 11 ವರ್ಷ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 15:58 IST
Last Updated 18 ಜೂನ್ 2025, 15:58 IST
ಕೊಪ್ಪಳದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಕಸಿತ ಭಾರತ ಸಂಕಲ್ಪ ಸಭೆಯಲ್ಲಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್‌ ಮಾತನಾಡಿದರು
ಕೊಪ್ಪಳದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಕಸಿತ ಭಾರತ ಸಂಕಲ್ಪ ಸಭೆಯಲ್ಲಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್‌ ಮಾತನಾಡಿದರು   

ಕೊಪ್ಪಳ: ‘ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಅಪಾರವಾಗಿದೆ’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್‌ ಹೇಳಿದರು.

ಮೋದಿ ಅವರು ಪ್ರಧಾನಿಯಾಗಿ 11 ವರ್ಷಗಳಾದ ಕಾರಣ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆದ ವಿಕಸಿತ ಭಾರತ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು ‘ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ, ಸಾಂಸ್ಕೃತಿಕ ವೈವಿಧ್ಯತೆಯನ್ನು, ರಾಷ್ಟ್ರೀಯ ಸಮಗ್ರತೆ, ಏಕತೆ ಹಾಗೂ ಭ್ರಾತೃತ್ವದ ಸಲುವಾಗಿ ಜಾತಿ, ಧರ್ಮ, ಭಾಷೆ, ಲಿಂಗ ಮತ್ತು ಪ್ರಾದೇಶಿಕತೆಯನ್ನು ರಕ್ಷಿಸುವಲ್ಲಿ ಅವರ ಸಾಧನೆ ಆಗಾಧ. ಈಗಿನ ಮತ್ತು ಉತ್ತಮ ಭವಿಷ್ಯಕ್ಕಾಗಿ ಮೋದಿ ಅವರನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ ‘ನರೇಂದ್ರ ಮೋದಿ ಅವರು ಮಹಿಳೆಯರ ಸಬಲೀಕರಣ ಮತ್ತು ರಾಜಕೀಯ ಸ್ಥಾನ ಪಡೆಯುವಲ್ಲಿ ಸಬಲರಾಗಬೇಕು. ಪ್ರತಿ ಕ್ಷೇತ್ರದಲ್ಲೂ ಮುಖ್ಯವಾಹಿನಿಯಲ್ಲಿ ಮಹಿಳೆಯರು ಇರಬೇಕು ಎನ್ನುವುದು ಅವರ ಸಂಕಲ್ಪವಾಗಿದೆ’ ಎಂದು ಹೇಳಿದರು.

ADVERTISEMENT

ಕಾರ್ಯಕ್ರಮದ ಸಂಚಾಲಕ ಜಿ. ಶ್ರೀಧರ್ ಕೆಸರಟ್ಟಿ, ಸುನಿಲ್ ಹೆಸರೂರು, ಪ್ರಕಾಶ್ ವಕೀಲರು, ಸಹ ಸಂಚಾಲಕ ಮಹೇಶ್ ಅಂಗಡಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.