ADVERTISEMENT

‘ಮೊಹರಂ ಆಚರಣೆ ಶಾಂತಿಯುತವಾಗಿರಲಿ’

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 15:01 IST
Last Updated 3 ಜುಲೈ 2025, 15:01 IST
ಕುಕನೂರು ತಾಲ್ಲೂಕಿನ ಕುದರಿಮೋತಿ ಗ್ರಾಮದಲ್ಲಿ ಮೊಹರಂ ಹಬ್ಬದ ಅಂಗವಾಗಿ ಶಾಂತಿ ಸಭೆ ನಡೆಯಿತು
ಕುಕನೂರು ತಾಲ್ಲೂಕಿನ ಕುದರಿಮೋತಿ ಗ್ರಾಮದಲ್ಲಿ ಮೊಹರಂ ಹಬ್ಬದ ಅಂಗವಾಗಿ ಶಾಂತಿ ಸಭೆ ನಡೆಯಿತು   

ಕುಕನೂರು: ‘ಭಾವೈಕ್ಯದ ಪ್ರತೀಕವಾದ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿ, ಸೌಹಾರ್ದದಿಂದ ಆಚರಿಸಬೇಕು’ ಎಂದು ಡಿವೈಎಸ್‌ಪಿ ಮುತ್ತಣ್ಣ ಸವರಗೋಳ ಹೇಳಿದರು.

ತಾಲ್ಲೂಕಿನ ಕುದರಿಮೋತಿ ಗ್ರಾಮದಲ್ಲಿ ನಡೆದ ಮೊಹರಂ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ತಾಲ್ಲೂಕಿನ ಕುದರಿಮೋತಿ ಶಾಂತಿ ಸೌಹಾರ್ದಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಹಿಂದೂಗಳು-ಮುಸ್ಲಿಮರು ಸೋದರ ಭಾವನೆಯಿಂದ ಬಾಳುತ್ತಿದ್ದಾರೆ. ಎಲ್ಲರೂ ಸೇರಿ ಹಬ್ಬಗಳನ್ನು ಆಚರಿಸುವುದು ಖುಷಿಯಾಗಿದೆ. ಮೊಹರಂ ಹಬ್ಬವನ್ನು ನೀವೆಲ್ಲರೂ ಸೇರಿ ಬಹಳಷ್ಟು ಸಡಗರ ಸಂಭ್ರಮದಿಂದ ಆಚರಿಸಿರಿ. ಅಹಿತಕರ ಘಟನೆಗಳು ಜರುಗಲಿವೆ ಎಂಬ ಸುಳಿವು ಸಿಕ್ಕರೆ, ನಮಗೆ ತಿಳಿಸಬೇಕು ಎಂದು ಹೇಳಿದರು.

ADVERTISEMENT

ಸಿಪಿಐ ಮೌನೇಶ ಮಾಲಿಪಾಟೀಲ, ಪಿಎಸ್ಐ ಪ್ರಶಾಂತ, ಗ್ರಾ.ಪಂ. ಅಧ್ಯಕ್ಷೆ ಫರೀದಾಬೇಗಂ ತಂಬಾಕದಾರ, ಬಸವಂತಪ್ಪ ದೊಡ್ಡಮನಿ, ಸುಭಾಷ ಈಡಿಗೇರ, ಮಾಹಾಂತಪ್ಪ ಸಿಡ್ನಳ್ಳಿ, ಅಮರೇಶ ತಲ್ಲೂರು, ಶರಣಯ್ಯ ಜಂಗಮೂರು, ಮಂಜುನಾಥ ಸಜ್ಜನ್, ರವಿ ಕಟಗಿ, ಮಾಬುಸಾಬ ಮಕಾಂದರ್, ವಿಜಯಕುಮಾರ ದಾಸರ, ಪಂಪಾಪತಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.