
ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದ್ದಾರೆ.
ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಜಿಲ್ಲಾಡಳಿತ ಜೊತೆಗೂಡಿ ಹಮ್ಮಿಕೊಂಡಿದ್ದ ಕೊಪ್ಪಳ ಅನ್ವೇಷಿಸಿ ಕಾರ್ಯಕ್ರಮದಲ್ಲಿ ಮಾತನಾಡುವಾಗ ಅವರು ಈ ಹೇಳಿಕೆ ನೀಡಿದ್ದರು.
ಇಂಥ ಸುದ್ದಿಗಳನ್ನು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಶೇ. 50ರಷ್ಟು ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ ವರ್ಷ ಮಾರ್ಚ್‌ನಲ್ಲಿ ಇಸ್ರೇಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿತ್ತು. ಒಡಿಶಾದ ಪ್ರವಾಸಿಗ ಬಿಬಾಶ್ ಎಂಬಾತನ ಮೃತದೇಹ ಪತ್ತೆಯಾಗಿತ್ತು. ಮದ್ಯದ ಅಮಲಿನಲ್ಲಿ ಕೃತ್ಯ ಎಸಗಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.