ADVERTISEMENT

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2024, 13:55 IST
Last Updated 16 ಏಪ್ರಿಲ್ 2024, 13:55 IST
<div class="paragraphs"><p> ಸಂಗಣ್ಣ ಕರಡಿ</p></div>

ಸಂಗಣ್ಣ ಕರಡಿ

   

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್‌ ಸಿಗದ ಕಾರಣಕ್ಕೆ ಬೇಸರಗೊಂಡಿದ್ದ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ಸಂಸದ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ ಸಂಜೆ ರಾಜೀನಾಮೆ ಕೊಟ್ಟಿದ್ದಾರೆ.

‘ಲೋಕಸಭೆ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರಿಗೆ ಈ ಮೇಲ್‌ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದೇನೆ’ ಎಂದು ಸಂಗಣ್ಣ ಕರಡಿ ತಿಳಿಸಿದ್ದಾರೆ.

ADVERTISEMENT

ಹಿಂದಿನ ಎರಡು ಅವಧಿಗೆ ಸತತವಾಗಿ ಸಂಸದರಾಗಿದ್ದ ಅವರು ಟಿಕೆಟ್ ಸಿಗದ ಕಾರಣಕ್ಕೆ ಅಸಮಾಧಾನಗೊಂಡಿದ್ದರಲ್ಲದೇ, ಪಕ್ಷದ ರಾಜ್ಯ ನಾಯಕರ ವಿರುದ್ಧ ಆಕ್ರೋಶಗೊಂಡಿದ್ದರು. ಅವರನ್ನು ಬಿ.ಎಸ್‌. ಯಡಿಯೂರಪ್ಪ, ಪ್ರಲ್ಹಾದ ಜೋಶಿ, ಬಸವರಾಜ ಬೊಮ್ಮಾಯಿ, ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಬೆಂಗಳೂರಿಗೆ ಕರೆಯಿಸಿ ಸಮಾಧಾನಪಡಿಸಿ ಪಕ್ಷ ಘೋಷಿಸಿದ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್‌ ಪರ ಪ್ರಚಾರ ಮಾಡುವಂತೆ ಹೇಳಿದ್ದರು.

ಬೆಂಗಳೂರಿನ ಸಭೆ ಬಳಿಕ ಕ್ಷೇತ್ರಕ್ಕೆ ಮರಳಿ ಬಿಜೆಪಿ ಅಭ್ಯರ್ಥಿ ಪರ ಕುಷ್ಟಗಿ ಮತ್ತು ಕೊಪ್ಪಳದಲ್ಲಿ ನಡೆದಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ’ಮೋದಿ ಮತ್ತೆ ಪ್ರಧಾನಿಯಾಗಲು ಬಸವರಾಜ ಅವರಿಗೆ ಮತ ನೀಡಿ’ ಎಂದು ಕೋರಿದ್ದರು. ಅದಾದ ಬಳಿಕ ಬಿಜೆಪಿಯ ಎಲ್ಲ ಚಟುವಟಿಕೆಯಿಂದ ಅವರು ಅಂತರ ಕಾಯ್ದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.