ಕುಕನೂರು: ತಾಲ್ಲೂಕಿನ ಮಂಗಳೂರು ಗ್ರಾಮದ ಸರ್ಕಾರಿ ಶಾಲೆ, ಕಾಲೇಜು ಆವರಣ ಅಕ್ಷರಶಃ ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ನಡೆದಾಡಲೂ ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟಿರುವ ಮೈದಾನದಲ್ಲಿ ಆಟವಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಮಕ್ಕಳಿದ್ದಾರೆ.
ಇದೇ ಆವರಣದಲ್ಲಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿದ್ದು, ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ. ಆವರಣದಲ್ಲಿ ನೀರು ಹರಿದು ಕೆಸರು ಮಯವಾಗಿದೆ. ಬಹಳ ವರ್ಷಗಳಿಂದಲೂ ಈ ಸಮಸ್ಯೆಯಿದ್ದು, ಶಾಲಾ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅಡ್ಡಿಯಾಗಿದೆ. ವಿದ್ಯಾಭ್ಯಾಸ ಮಾಡುವ ಆವರಣ ಸುಂದರ, ಸ್ವಚ್ಛವಾಗಿರಬೇಕು. ಆದರೆ, ಶಾಲಾ ಆವರಣ ಮಾತ್ರ ಅಧೋಗತಿಗೆ ತಲುಪಿದೆ.
ಬಹಳ ವರ್ಷಗಳಿಂದಲೂ ಈ ಸಮಸ್ಯೆಯಿದ್ದು, ಈ ಬಾರಿ ಸಮಸ್ಯೆ ತೀವ್ರ ಉಲ್ಭಣಿಸಿದೆ. ನಿರ್ವಹಣೆ ಕೊರತೆಯೇ ಇದಕ್ಕೆ ಕಾರಣ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಾರೆ. ಇದರೊಂದಿಗೆ ಶಾಲಾ ಮೈದಾನವೂ ಸುರಕ್ಷತೆಯಿಂದ ಕೂಡಿಲ್ಲ. ಎಲ್ಲಿ ನೋಡಿದರೂ ಗುಂಡಿಗಳ ಹಾವಳಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.