ADVERTISEMENT

‘ಸೌಹಾರ್ದದಿಂದ ಮೊಹರಂ ಆಚರಿಸಿ’

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 12:42 IST
Last Updated 10 ಆಗಸ್ಟ್ 2021, 12:42 IST
ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಮಾತನಾಡಿದರು
ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಮಾತನಾಡಿದರು   

ಗಂಗಾವತಿ: ‘ಮೊಹರಂ ಅನ್ನು ಹಿಂದೂ–ಮುಸ್ಲಿಮರು ಒಟ್ಟಿಗೆ ಶಾಂತಿ-ಸೌಹಾರ್ದದಿಂದ ಆಚರಿಸಬೇಕು’ ಎಂದು ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ತಿಳಿಸಿದರು.

ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ನಡೆದ ಮೊಹರಂ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮೊಹರಂ ಅನ್ನು ಎಲ್ಲ ಸಮಾಜದವರು ಭಾವೈಕ್ಯದ ಜತೆಗೆ ಕೋವಿಡ್ ಮಾರ್ಗಸೂಚಿ ಪಾಲಿಸುವ ಮೂಲಕ ಆಚರಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೇವರು ಪ್ರತಿಷ್ಠಾಪನಾ ಮಂಡಳಿಯವರು ಸಾಧ್ಯವಾದಷ್ಟು ಜನ ಜಂಗುಳಿ ಸೇರದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ದೇವರು ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

10 ವರ್ಷದ ಒಳಗಿನ ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯರು ಭಾಗವಹಿಸುವಂತಿಲ್ಲ ಎಂದು ಹೇಳಿದರು.

ನಗರ ಪೊಲೀಸ್ ಠಾಣೆ ಪಿ.ಐ ವೆಂಕಟಸ್ವಾಮಿ, ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಾಮಿದ್ ಮನಿಯಾರ್, ಜೋಗದ ನಾರಾಯಣಪ್ಪ, ನಗರಸಭೆ ಸದಸ್ಯ ನಾಗರಾಜ ಸೇರಿ ಹಿಂದೂ ಮತ್ತು ಮುಸ್ಲಿಂ ಸಮಾಜದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.