ADVERTISEMENT

ಮುನಿರಾಬಾದ್ | ದುರ್ಗಾದೇವಿ ಜಾತ್ರಾ ಮಹೋತ್ಸವ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 7:18 IST
Last Updated 9 ಫೆಬ್ರುವರಿ 2026, 7:18 IST
ದುರ್ಗಾದೇವಿಯ ವಿಗ್ರಹ
ದುರ್ಗಾದೇವಿಯ ವಿಗ್ರಹ   

ಮುನಿರಾಬಾದ್: ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯಲಿರುವ ಹಿಟ್ನಾಳ ಗ್ರಾಮದ ಗ್ರಾಮದೇವತೆ ದುರ್ಗಾದೇವಿ ಜಾತ್ರಾ ಮಹೋತ್ಸವವು ಫೆ.9 ಮತ್ತು ಫೆ. 10 ರಂದು ನಡೆಯಲಿದೆ.

ಫೆ.9 ರಂದು ಬೆಳಿಗ್ಗೆ ನಾರಿಯರ ಕುಂಭ, ಕಳಸ, ವಾದ್ಯ ಮೇಳದೊಂದಿಗೆ ದುರ್ಗಾದೇವಿಯ ಭಾವಚಿತ್ರದ ಮೆರವಣಿಗೆ, ದೇವಿಗೆ ವಿಶೇಷಪೂಜೆ, ಪುಷ್ಪಾಲಂಕಾರ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಅನ್ನ ಸಂತರ್ಪಣೆ ಜರುಗಲಿದೆ.

ಮಂಗಳವಾರ ಬೆಳಿಗ್ಗೆ ದೇವಿಗೆ ಪಂಚಾಮೃತ, ಅಭಿಷೇಕ, ಕುಂಕುಮಾರ್ಚನೆ, ಉಡಿ ತುಂಬುವ ಕಾರ್ಯಕ್ರಮ, ವಿಶೇಷ ಪೂಜೆ, ಮಹಾಮಂಗಳಾರತಿ, ಸಂಜೆ ಪಲ್ಲಕ್ಕಿ ಉತ್ಸವ ನಡೆಯಲಿದೆ.

ADVERTISEMENT

ಜಾತ್ರಾ ಮಹೋತ್ಸವದ ಅಂಗವಾಗಿ ಫೆ.11 ರಂದು ರಕ್ತರಾತ್ರಿ ಪೌರಾಣಿಕ ನಾಟಕ ಪ್ರದರ್ಶನ ಇರಲಿದೆ.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.