
ಕುಷ್ಟಗಿ: ತಾಲ್ಲೂಕಿನ ದೋಟಿಹಾಳ ಗ್ರಾಮದ ಅವಧೂತ ಶುಕಮುನಿಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿವಿಧ ಧಾರ್ಮಿಕ ಆಚರಣೆಗಳಿಗೆ ಚಾಲನೆ ನೀಡಲಾಯಿತು.
ಶುಕಮುನಿಸ್ವಾಮಿ ಮಠದಲ್ಲಿ ಶಿವರಾತ್ರಿ ಅಮಾವಾಸ್ಯೆವರೆಗೂ ಅಹೋರಾತ್ರಿ ನಿರಂತರ ನಡೆಯುವ ಸಪ್ತಭಜನೆ ಹಾಗೂ ಮುತ್ಯಾನ ಪಲ್ಲಕ್ಕಿ ಉತ್ಸವ ಆರಂಭಗೊಂಡಿದ್ದು, ಪ್ರತಿದಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಲಿದೆ. ಆರಂಭದಲ್ಲಿ ಗ್ರಾಮದ ಹೊರವಲಯದ ಹಳ್ಳದ ಬಳಿ ತೆರಳಿದ ಪಲ್ಲಕ್ಕಿಗೆ ಗುರು ಹಿರಿಯರು ಗಂಗಾಪೂಜೆ ನೆರವೇರಿಸಿ ಸಂಚಾರಕ್ಕೆ ಬೀಳ್ಕೊಟ್ಟರು.
ಜಾತ್ರಾ ಮಹೋತ್ಸವದ ನಿಮಿತ್ತ ಕಿರುತೆರೆ ಕಲಾವಿದರನ್ನು ಒಳಗೊಂಡಂತೆ ಸಾಂಸ್ಕೃತಿಕ, ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳು ನಡೆಯಲಿದ್ದು ಫೆ.17ರಂದು ಸಂಜೆ ಮಹಾರಥೋತ್ಸವ ಜರುಗಲಿದೆ.
ವಾರದವಾರೆಗೂ ಶುಕಮುನಿಸ್ವಾಮಿ ಮಠದಲ್ಲಿ ಭಕ್ತರಿಗೆ ರಾತ್ರಿ 11ಗಂಟೆವರೆಗೂ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.