ADVERTISEMENT

ನಾರಾಯಣ ಗುರು ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2021, 12:33 IST
Last Updated 23 ಆಗಸ್ಟ್ 2021, 12:33 IST
ಕುಷ್ಟಗಿಯಲ್ಲಿ ನಡೆದ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಅಮರೇಗೌಡ ಬಯ್ಯಾಪುರ ಪಾಲ್ಗೊಂಡಿದ್ದರು
ಕುಷ್ಟಗಿಯಲ್ಲಿ ನಡೆದ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಅಮರೇಗೌಡ ಬಯ್ಯಾಪುರ ಪಾಲ್ಗೊಂಡಿದ್ದರು   

ಕುಷ್ಟಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ಸರ್ಕಾರಿ ಕಚೇರಿಗಳು ಮತ್ತು ಶಾಲಾ–ಕಾಲೇಜುಗಳಲ್ಲಿ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು.

ಇಲ್ಲಿಯ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಅಮರೇಗೌಡ ಬಯ್ಯಾಪುರ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,‘ಕೇರಳದಲ್ಲಿ ಜನಿಸಿದ ಸಮಾಜ ಸುಧಾರಕರಲ್ಲಿ ಒಬ್ಬರಾಗಿದ್ದ ನಾರಾಯಣ ಗುರು ಅವರು ಜಾತಿ ತಾರತಮ್ಯ ನಿವಾರಿಸಿ ಸಮಾನತೆ ತರಲು ಚಳವಳಿ ರೂಪಿಸಿದರು. ಗುರುಗಳ ತತ್ವ ಮತ್ತು ಆದರ್ಶ ಅಳವಡಿಸಿಕೊಳ್ಳಬೇಕು. ಜಯಂತಿ ಆಚರಣೆಗೆ ಮಾತ್ರ ಸೀಮಿತಗೊಳ್ಳಬಾರದು’ ಎಂದರು.

ADVERTISEMENT

ತಹಶೀಲ್ದಾರ್ ಎಂ.ಸಿದ್ದೇಶ, ಈಡಿಗ ಸಮುದಾಯ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಉಮಾಕಾಂತಗೌಡ, ಶುಕರಾಮಪ್ಪ ಗೋತಗಿ, ಶರಣಪ್ಪ ಹಂಪನಾಳ, ಶ್ರೀನಿವಾಸ ಈಳಗೇರ, ಅಶೋಕ ವಣಗೇರಿ, ಪಟ್ಟಣ ಪಂಚಾಯಿತಿ ಸದಸ್ಯ ಬಸವರಾಜ ಈಳಗೇರ, ಬಸವರಾಜ ಭಾಗ್ಯದ ಸೇರಿ ತಾಲ್ಲೂಕಿನ ಈಡಿಗ ಸಮುದಾಯದ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.