ADVERTISEMENT

ಕನಕಗಿರಿ: ‘ನರೇಗಾ’ ಕಾಮಗಾರಿ ಆರಂಭಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2021, 11:51 IST
Last Updated 1 ಆಗಸ್ಟ್ 2021, 11:51 IST
ಕನಕಗಿರಿ ಸಮೀಪದ ಕರಡೋಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ಕಾರ್ಮಿಕರು ಈಚೆಗೆ ಪ್ರತಿಭಟನೆ ನಡೆಸಿದರು
ಕನಕಗಿರಿ ಸಮೀಪದ ಕರಡೋಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ಕಾರ್ಮಿಕರು ಈಚೆಗೆ ಪ್ರತಿಭಟನೆ ನಡೆಸಿದರು   

ಕನಕಗಿರಿ: ಸಮೀಪದ ಕರಡೋಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ. ಎಚ್. ಪೂಜಾರ ಮಾತನಾಡಿ, ‘ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳಲ್ಲಿ ತ್ವರಿತ ಗತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು ಆರಂಭಿಸಿ ಜನರು ಗುಳೆ ಹೋಗದಂತೆ ತಡೆಯಬೇಕು’ ಎಂದು ಅವರು ಆಗ್ರಹಿಸಿದರು.

ಪ್ರತಿ ಕಾರ್ಮಿಕನಿಗೂ ವರ್ಷದಲ್ಲಿ 200 ದಿನ ಕೂಲಿ ಕೆಲಸ ನೀಡಬೇಕು. ಕೂಲಿ ಹಣವನ್ನು ₹ 400ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ನನೆಗುದಿಗೆ ಬಿದ್ದಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಆರಂಭಿಸಿ ಜನರಿಗೆ ಶುದ್ದ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು ಎಂದರು.

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶಗೌಡ, ಬಿ.ಎನ್.ಯರದಿಹಾಳ ಸೇರಿದಂತೆ ಹಲವು ಕಾರ್ಮಿಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.