ADVERTISEMENT

ಡೆಂಗಿ ತಡೆಗೆ ಸಹಕಾರ ಅಗತ್ಯ: ಡಾ.ಅಲಕನಂದಾ.ಡಿ.ಮಳಗಿ

ರಾಷ್ಟ್ರೀಯ ಡೆಂಗಿ ದಿನಾಚರಣೆ: ನಗರದಲ್ಲಿ ಜನಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 18 ಮೇ 2022, 4:05 IST
Last Updated 18 ಮೇ 2022, 4:05 IST
ಕೊಪ್ಪಳದ ಹಳೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಡೆಂಗಿಜನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ, ಡಾ.ಕೆ.ವೆಂಕಟೇಶ ಚಾಲನೆ ನೀಡಿದರು
ಕೊಪ್ಪಳದ ಹಳೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಡೆಂಗಿಜನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ, ಡಾ.ಕೆ.ವೆಂಕಟೇಶ ಚಾಲನೆ ನೀಡಿದರು   

ಕೊಪ್ಪಳ: ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಅದರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಲಕನಂದಾ.ಡಿ.ಮಳಗಿ ಹೇಳಿದರು.

ರಾಷ್ಟ್ರೀಯಡೆಂಗಿ ದಿನಾಚರಣೆ ಅಂಗವಾಗಿ ನಗರದ ಹಳೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಪ್ರತಿ ವರ್ಷದ ಮೇ 16 ಅನ್ನು ಜಿಲ್ಲೆಯಾದ್ಯಂತ ರಾಷ್ಟ್ರೀಯಡೆಂಗಿ ದಿನವನ್ನಾಗಿ ಆಚರಿಸಿ, ರೋಗ ಪ್ರಸರಣ ಅವಧಿಯ ಮುನ್ನವೇ ಜನಸಮುದಾಯವನ್ನು ಜಾಗೃತಿಗೊಳಿಸಲು ವ್ಯಾಪಕ ಅಭಿಯಾನ, ಜಾಥಾಗಳು, ರ‍್ಯಾಲಿ, ಅಂತರ್ ಇಲಾಖಾ ಸಭೆ ಸಮಾರಂಭಗಳನ್ನು ಜಿಲ್ಲೆಯಾದ್ಯಂತ ನಡೆಸಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ವೆಂಕಟೇಶ್ ಕೆ. ಮಾತನಾಡಿ, ಡೆಂಗಿ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುತ್ತದೆ ಹಾಗೂ ಇದು ಹಗಲು ಹೊತ್ತಿನಲ್ಲಿಯೇ ಕಚ್ಚುತ್ತವೆ. ಈಡಿಸ್ ಸೊಳ್ಳೆಗಳು ನೀರು ಶೇಖರಣೆ ಸಲಕರಣೆಗಳಲ್ಲಿ, ಶುದ್ದ ನೀರಿನಲ್ಲಿಯೇ ಸಂತಾನಾಭಿವೃದ್ದಿ ಮಾಡುತ್ತವೆ. ಆದ್ದರಿಂದ ನೀರು ಶೇಖರಣೆ ಸಲಕರಣೆಗಳನ್ನು ಸದಾಕಾಲ ಮುಚ್ಚಿಡಬೇಕು ಹಾಗೂ ಮನೆಯ ಒಳಗೆ ಮತ್ತು ಹೊರಗೆ ನೀರು ನಿಲ್ಲದಂತೆ ಎಚ್ಚರವಹಿಸಿಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ ಮಾತನಾಡಿ, ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಬೇಕು ಎಂದರು.

ನಗರದಾದ್ಯಂತ ಸಂಚರಿಸಿದ ‘ಆರೋಗ್ಯ ಶಿಕ್ಷಣ ವಾಹಿನಿ’ ವಾಹನದಲ್ಲಿ ಸರ್ಕಾರದ ಮುಖ್ಯಮಂತ್ರಿ ಹಾಗೂ ಆರೋಗ್ಯ ಮಂತ್ರಿಗಳ ಡೆಂಗಿ ಜಾಗೃತಿ ಸಂದೇಶಗಳನ್ನು ಬಿತ್ತರಿಸಲಾಯಿತು. ಜಾಗೃತಿ ಗೀತೆಗಳನ್ನು ಗಾಯನ ಜಾಗೃತಿ ಕರಪತ್ರಗಳನ್ನು ಹಂಚುವುದರ ಮೂಲಕ ಹಾಗೂ ಭಿತ್ತಿಪತ್ರಗಳನ್ನು ಪ್ರದರ್ಶಿಸುವುದರ ಮೂಲಕ ನಗರದಲ್ಲಿ ಜಾಥಾ ಯಶಸ್ವಿಗೊಳಿಸಲಾಯಿತು.

ಜಿಲ್ಲಾ ಉಪ ಆರೋಗ್ಯ ಶಿಕ್ಣಣಾಧಿಕಾರಿ ಶಿವಾನಂದ ಪೂಜಾರ ಸ್ವಾಗತಿಸಿದರು. ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ರಮೇಶ್.ಕೆ, ಜಿಲ್ಲಾ ವಿ.ಬಿ.ಡಿ ಸಲಹೆಗಾರರು, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಕ್ಷೇತ್ರ ಆರೋಗ್ಯ ಶಿಕ್ಣಣಾಧಿಕಾರಿ ಗಂಗಮ್ಮ, ಮತ್ತು ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.