ADVERTISEMENT

ಜಂತುನಿವಾರಕ ಮಾತ್ರೆಯಿಂದ ವಂಚಿತರಾಗದಿರಲಿ: ನೇಗಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 4:02 IST
Last Updated 5 ಫೆಬ್ರುವರಿ 2026, 4:02 IST
ವರ್ಣಿತ್‌ ನೇಗಿ
ವರ್ಣಿತ್‌ ನೇಗಿ   

ಕೊಪ್ಪಳ: ‘ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಡಿ ಯಾವುದೇ ಮಗು ಜಂತುನಿವಾರಕ ಮಾತ್ರೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಹೇಳಿದರು.

ಇತ್ತೀಚೆಗೆ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಟಿ.ಲಿಂಗರಾಜು ಮಾತನಾಡಿ ‘ಮಕ್ಕಳಲ್ಲಿ ಮತ್ತು ಹದಿ-ಹರೆಯದವರಲ್ಲಿ ಕಂಡಬರುವ ಜಂತುಬಾಧೆ, ಅಪೌಷ್ಠಿಕತೆ ಮತ್ತು ರಕ್ತಹೀನತೆ ತಡೆಗಟ್ಟುವುದು ಕಾರ್ಯಕ್ರಮ ಉದ್ದೇಶವಾಗಿದೆ’ ಎಂದರು.

ADVERTISEMENT

ಜಿಲ್ಲಾ ಆರ್.ಸಿ.ಎಚ್ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪ್ರಕಾಶ ವಿ. ಮಾತನಾಡಿ ‘ಜಿಲ್ಲೆಯಲ್ಲಿ ಫೆ. 10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಆಯೋಜಿಸಲಾಗಿದ್ದು, 1ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಜಂತುನಿವಾರಕ ಅಲ್ಬೆಂಡಾಜೋಲ್ ಮಾತ್ರೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ, ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಕೊಡಲಾಗುತ್ತದೆ’ ಎಂದರು.

ಆರೋಗ್ಯ ಜಿಲ್ಲಾ ಅನುಷ್ಠಾನಾಧಿಕಾರಿ ಡಾ. ರವೀಂದ್ರನಾಥ್ ಎಂ.ಎಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಶಶಿಧರ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಕಾಶ ಎಚ್., ಜಿಲ್ಲಾ ಯೋಜನಾ ಅಭಿವೃದ್ಧಿ ಅಧಿಕಾರಿ ಡಾ. ಕುಮಾರಸ್ವಾಮಿ ಗೋನಾಳ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಫೆ. 10ರಂದು ನಡೆಯುವ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯ ಸಾಧಿಸಿ ಅಗತ್ಯ ಕ್ರಮಕೈಗೊಳ್ಳಬೇಕು.
ವರ್ಣಿತ್‌ ನೇಗಿ ಜಿಲ್ಲಾ ಪಂಚಾಯಿತಿ ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.