ADVERTISEMENT

ನವಲಿ | ಕಬ್ಬಡಿ ಪಂದ್ಯಾಟ: ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2023, 15:49 IST
Last Updated 23 ಸೆಪ್ಟೆಂಬರ್ 2023, 15:49 IST
ಕನಕಗಿರಿ ಸಮೀಪದ ನವಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ‌ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು
ಕನಕಗಿರಿ ಸಮೀಪದ ನವಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ‌ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು    

ಕನಕಗಿರಿ: ಸಮೀಪದ ನವಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯಶಿಕ್ಷಕ ಪರಯ್ಯ ಅರವಟಗಿಮಠ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಪ್ಪಳ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಗಂಗಾವತಿ ಅವರ ಆಶ್ರಯದಲ್ಲಿ ಶನಿವಾರ ಗಂಗಾವತಿಯ ಜೆಎಸ್‌ಎಸ್ ಕಾಲೇಜು ಮೈದಾನದಲ್ಲಿ ನಡೆದ ಪ್ರೌಢಶಾಲಾ ಮಟ್ಟದ ಕಬಡ್ಡಿ ಪಂದ್ಯದಲ್ಲಿ ಪ್ರಥಮ‌ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಲ್ಲದಿದ್ದರೂ ಇತರೆ ಶಿಕ್ಷಕರ ಮಾರ್ಗದರ್ಶನ ಹಾಗೂ ಸ್ಥಳೀಯರ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ಸಾಧನೆ ಮಾಡಿರುವುದಕ್ಕೆ ಜನಪ್ರತಿನಿಧಿಗಳು ಹಾಗೂ ಶಾಲೆಯ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.