ADVERTISEMENT

ಯಲಬುರ್ಗಾ: ನೂತನ ಅಂಗನವಾಡಿ ಕೇಂದ್ರ ಉದ್ಘಾಟನೆ 

​ಪ್ರಜಾವಾಣಿ ವಾರ್ತೆ
Published 26 ಮೇ 2025, 15:15 IST
Last Updated 26 ಮೇ 2025, 15:15 IST
ಯಲಬುರ್ಗಾ ತಾಲ್ಲೂಕು ಮಕ್ಕಳ್ಳಿ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟದಪ್ಪ ಮಾಳೆಕೊಪ್ಪ ಚಾಲನೆ ನೀಡಿದರು, ತಾಪಂ ಸಹಾಯಕ ನಿರ್ದೇಶಕ ಹನುಮಂತಗೌಡ ಪೊಲೀಸ್‍ಪಾಟೀಲ ಸೇರಿ ಅನೇಕರು ಇದ್ದರು. 
ಯಲಬುರ್ಗಾ ತಾಲ್ಲೂಕು ಮಕ್ಕಳ್ಳಿ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟದಪ್ಪ ಮಾಳೆಕೊಪ್ಪ ಚಾಲನೆ ನೀಡಿದರು, ತಾಪಂ ಸಹಾಯಕ ನಿರ್ದೇಶಕ ಹನುಮಂತಗೌಡ ಪೊಲೀಸ್‍ಪಾಟೀಲ ಸೇರಿ ಅನೇಕರು ಇದ್ದರು.    

ಯಲಬುರ್ಗಾ: ತಾಲ್ಲೂಕಿನ ಮಕ್ಕಳ್ಳಿ ಗ್ರಾಮದಲ್ಲಿ ಆರ್‌ಐಡಿಎಫ್ ಯೋಜನೆ ಅಡಿಯಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉದ್ಘಾಟಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟದಪ್ಪ ಮಾಳೆಕೊಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಕಾರ್ಯಕರ್ತೆಯರು ನಿರೀಕ್ಷೆಗೂ ಮೀರಿ ಉತ್ತಮ ಕೆಲಸ ನಿರ್ವಹಿಸುತ್ತಿರುವುದರಿಂದ ಕೇಂದ್ರಗಳು ಹೆಚ್ಚು ಕ್ರಿಯಾಶೀಲತೆಯಿಂದ ಕೂಡಿವೆ. ಹಾಗೆಯೇ ಅಗತ್ಯ ಇರುವ ಕಡೆಗಳಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಿ ಬಳಕೆಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಇದರಿಂದ ಮಕ್ಕಳಿಗೂ ಉತ್ತಮ ವಾತಾವರಣದಲ್ಲಿ ಪೋಷಣೆ ಮತ್ತು ಆರೈಕೆ ಸಿಗುವಂತೆ ಮಾಡಲಾಗುತ್ತಿದೆ. ಸಕಾಲದಲ್ಲಿ ಆಹಾರ ಧಾನ್ಯಗಳನ್ನು ವಿತರಣೆಗೆ ಕ್ರಮಕೈಗೊಳ್ಳುತ್ತಿರುವುದರಿಂದ ತಾಲ್ಲೂಕಿನಲ್ಲಿ ಈ ಯೋಜನೆಯು ಪರಿಣಾಮಕಾರಿಯಾಗಿ ಜಾರಿಗೊಳ್ಳುತ್ತಿದೆ ಎಂದು ಅಭಿಪ್ರಾಯಪಟ್ಟರು.

ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ಹನುಮಂತಗೌಡ ಪೊಲೀಸ್ ಪಾಟೀಲ ಮಾತನಾಡಿ, ಅಂಗವನಾಡಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ಮುಖ್ಯ. ಶೌಚಾಲಯ ಇಲ್ಲದೇ ಇರುವ ಕೇಂದ್ರಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಕ್ರಮಕೈಗೊಳ್ಳಬಹುದಾಗಿದೆ ಎಂದರು. 11.95 ಲಕ್ಷದಲ್ಲಿ ನಿರ್ಮಾಣಗೊಂಡಿರುವ ನೂತನ ಅಂಗನವಾಡಿ ಕೇಂದ್ರವನ್ನು ಸರಿಯಾದ ನಿರ್ವಹಣೆ ಮತ್ತು ಬಳಕೆಗೆ ಕಾರ್ಯಕರ್ತೆಯರು ಹೆಚ್ಚಿನ ಆಸಕ್ತಿ ತೋರುವುದು ಅವಶ್ಯಕ ಎಂದು ಹೇಳಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ನೀಲಪ್ಪ ಹೊಸ್ಮನಿ ಮಾತನಾಡಿದರು. ಮುರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಯಮನಪ್ಪ ಮಾಳಿ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ್ಳಿಯ ಶಿವಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಷ್ಪಲತಾ ಮಾಲಿಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯ ಪುಷ್ಪಾವತಿ ಕರೆಕುರಿ, ವಜ್ರಬಂಡಿ ಮೇಲ್ವಿಚಾರಕಿ ಗಂಗಾ ಮೇಟಿ, ಮುಖಂಡರಾದ ಲಿಂಗರಾಜ ಹೊಸ್ಮನಿ, ದುರಗಪ್ಪ ಮಕ್ಕಳ್ಳಿ,ಶೇಖರಗೌಡ ಮಾಲಿಪಾಟೀಲ್, ಮುದಿಯಪ್ಪ ಕರೆಕುರಿ, ಗವಿಸಿದ್ದಪ್ಪ ಹಿರೇಮಠ, ಸಂಗಪ್ಪ ಹುಣಶಿಹಾಳ, ಅಂಗನವಾಡಿ ಕಾರ್ಯಕರ್ತೆ ವಿಜಯಲಕ್ಷ್ಮಿ ದುರಗಪ್ಪ ಮಕ್ಕಳ್ಳಿ, ಶೋಭಾ ಚಿತ್ತರಗಿಮಠ, ಸುಜಾತ ಹಡಪದ, ಆಶಾ ಕಾರ್ಯಕರ್ತೆ ಗೀತಾ ಶರಣಪ್ಪಗೌಡ ಸೇರಿ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.