ADVERTISEMENT

ಪಿಎಸ್ಐ ಶೈಲಾ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 7:31 IST
Last Updated 27 ನವೆಂಬರ್ 2021, 7:31 IST
ಶೈಲಾ ಪ್ಯಾಟಿಶೆಟ್ಟರ
ಶೈಲಾ ಪ್ಯಾಟಿಶೆಟ್ಟರ   

ಅಳವಂಡಿ: ಗ್ರಾಮದ ಪೊಲೀಸ್ ಠಾಣೆಯಲ್ಲಿ ನೂತನ ಪಿಎಸ್ಐ ಶೈಲಾ ಪ್ಯಾಟಿಶೆಟ್ಟರ ಗುರುವಾರ ಅಧಿಕಾರ ಸ್ವೀಕರಿಸಿದರು.

ಶೈಲಾ ಅವರು ವಿಜಯನಗರ ಜಿಲ್ಲೆಯ ಗಾದಿಗನೂರ ಪೊಲೀಸ್ ಠಾಣೆಯಿಂದ ಅಳವಂಡಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, 10 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಅಳವಂಡಿ ವ್ಯಾಪ್ತಿಯಲ್ಲಿ ಯಾವುದೇ ಸಮಯದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಲ್ಲ ಎಂದರು.

ADVERTISEMENT

‘ಯಾವುದೇ ಸಮಸ್ಯೆ ಇದ್ದರೂ ಸಾರ್ವಜನಿಕರು ಠಾಣೆಗೆ ಭೇಟಿ ನೀಡಿ ಮಾಹಿತಿ ನೀಡಿ ಅಥವಾ ಕರೆ ಮಾಡುವ ಮೂಲಕ ತಿಳಿಸಬೇಕು. 24 ಗಂಟೆಯಲ್ಲೇ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಠಾಣಾ ವ್ಯಾಪ್ತಿಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಜನರ ಸೇವೆ ಸಲ್ಲಿಸಲು ಸಿದ್ಧವಿದ್ದು, ಅಪರಾಧ ತಡೆಗಟ್ಟುವಲ್ಲಿ ಜನರ ಸಹಕಾರ ಅಗತ್ಯವಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.