ADVERTISEMENT

ಯಾವುದೇ ಬಣ ಇಲ್ಲ: ತಂಗಡಗಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 6:43 IST
Last Updated 26 ನವೆಂಬರ್ 2025, 6:43 IST

ಕನಕಗಿರಿ (ಕೊಪ್ಪಳ ಜಿಲ್ಲೆ): ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.‌ಕೆ.‌ಶಿವಕುಮಾರ್‌ ಹೆಸರಿನಲ್ಲಿ ಯಾವುದೇ ಬಣಗಳು‌ ಇಲ್ಲ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಂತ್ರಿಮಂಡಲದ ಪುನರ್‌ ರಚನೆಯನ್ನು ನಿರ್ಧಾರ ಮಾಡುವುದು ಸಹ ಹೈಕಮಾಂಡ್ ಅವರಿಗೆ ಬಿಟ್ಟಿದ್ದು. ಶಾಸಕರು ತಮ್ಮನ್ನು ಮಂತ್ರಿಮಂಡಲದಲ್ಲಿ ಸೇರಿಸಿಕೊಳ್ಳುವಂತೆ ಒತ್ತಾಯಿಸಿ ಮನವಿ ಸಲ್ಲಿಸಲು ದೆಹಲಿಗೆ ಹೋಗುತ್ತಾರೆ. ಅವರಿಗೆ ಸಚಿವರಾಗಬೇಕೆಂಬ ಆಸೆ‌ ಇರುತ್ತದೆ. ಹೀಗಾಗಿ ಹೈಕಮಾಂಡ್ ಅವರನ್ನು ಭೇಟಿಯಾಗಿರುವುದರಲ್ಲಿ ಯಾವುದೇ ತಪ್ಪು ಇಲ್ಲ’ ಎಂದರು.

‘ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ನಾನು ಕಾಂಗ್ರೆಸ್ ತೊರೆದಿಲ್ಲ. ಯಾವುದೇ‌ ಬಣದಲ್ಲಿ ಗುರುತಿಸುವಂಥ ಪ್ರಮಯವೇ ಇಲ್ಲ’ ಎಂದು ಪ್ರತಿಪಾದಿಸಿದರು.

ADVERTISEMENT

‘ಪಕ್ಷದಲ್ಲಿ ನವೆಂಬರ್ ಕ್ರಾಂತಿಯೂ ಇಲ್ಲ, ವಾಂತಿಯೂ ಇಲ್ಲ’ ಎಂದು ಹೇಳಿದರು.

‘ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇದೆ. ರಾಹುಲ್‌ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿದ್ದು, ಹೈಕಮಾಂಡ್ ಸಹ ಆಗಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.