ADVERTISEMENT

ಕೊಪ್ಪಳ: ಬೆಳೆ ಸಮೀಕ್ಷೆ ಮಾಹಿತಿ ದಾಖಲಿಸಲು ರೈತರಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 14:18 IST
Last Updated 16 ಜುಲೈ 2024, 14:18 IST

ಕೊಪ್ಪಳ: ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ನಡೆಸಿ ಸ್ವತಃ ಮೊಬೈಲ್ ತಂತ್ರಾಶದ ಮೂಲಕ ಮಾಹಿತಿ ದಾಖಲಿಸಬಹುದಾಗಿದೆ.

ಪೂರ್ವ ಮುಂಗಾರು ಬೆಳೆಗಳ ಮಾಹಿತಿ ದಾಖಲಿಸಲು ಜುಲೈ 22 ಕೊನೆಯ ದಿನವಾಗಿದ್ದು, ರೈತರು ಮುಂಗಾರು ಹಂಗಾಮಿನ  Crop Survey Kharif  2024 ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ಧಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್‌ಟಿಸಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿ ಬಳಕೆ ಮಾಡಲಾಗುತ್ತದೆ.

ADVERTISEMENT

ಇದರಿಂದ ಮುಂಬರುವ ವ್ಯತ್ಯಾಸ ತಡೆಯಬಹುದಾಗಿದೆ. ಈಗಾಗಲೇ ಗ್ರಾಮವಾರು ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದ್ದು, ಇವರ ಸಹಾಯ ಪಡೆದು ಮಾಹಿತಿ ಆ್ಯಪ್‌ ಡೌನ್‌ಲೋಡ್ ಮಾಡಬಹುದಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್‌. ತಿಳಿಸಿದ್ದಾರೆ. 

ಸಾಧಕರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲಾ ವ್ಯಾಪ್ತಿಯಲ್ಲಿ 2024ನೇ ಸಾಲಿಗೆ ಕೇಂದ್ರ ಸರ್ಕಾರವು ಅಂಗವಿಕಲರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಷ್ಟ್ರಪ್ರಶಸ್ತಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅಂಗವಿಕಲರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳು ಅಗತ್ಯ ದಾಖಲಾತಿಗಳೊಂದಿಗೆ ಜು. 31ರ ಒಳಗೆ www.awards.gov.in ಮೂಲಕ ಆನ್‌ಲೈನ್‌ನಿಂದ ಅರ್ಜಿ ಸಲ್ಲಿಸಬಹುದಾಗಿದೆ. ಇದರ ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಇನ್ನಷ್ಟು ಮಾಹಿತಿಗೆ ಅಂಗವಿಕಲರ ಮಾಹಿತಿ ಸಲಹಾ ಕೇಂದ್ರದ ದೂರವಾಣಿ 08539-295496 ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.