ADVERTISEMENT

ನರೇಗಾ ಸಿಬ್ಬಂದಿ ಪ್ರತಿಭಟನೆ: ತಾ.ಪಂ ಇಒ ಭೇಟಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2025, 6:20 IST
Last Updated 12 ಜುಲೈ 2025, 6:20 IST
ಯಲಬುರ್ಗಾ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನರೇಗಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಪಾಟೀಲ ಬಿರಾದಾರ ಭೇಟಿ ನೀಡಿ ಮಾತನಾಡಿದರು  
ಯಲಬುರ್ಗಾ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನರೇಗಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಪಾಟೀಲ ಬಿರಾದಾರ ಭೇಟಿ ನೀಡಿ ಮಾತನಾಡಿದರು     

ಯಲಬುರ್ಗಾ: ಬಾಕಿ ವೇತನ ಪಾವತಿಸಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನರೇಗಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನವೂ ಮುಂದುವರಿದಿದೆ.

ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸೇರಿದ ವಿವಿಧ ಹಂತದ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಪ್ರತಿಭಟನೆ ಬೆಂಬಲಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ವೀರನಗೌಡ ಹಾಗೂ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಫಕೀರಪ್ಪ ಕಟ್ಟಿಮನಿ ಮಾತನಾಡಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಪಾಟೀಲ ಬಿರಾದಾರ ಭೇಟಿ ನೀಡಿ ಮಾತನಾಡಿ,‘ನರೇಗಾ ಸಿಬ್ಬಂದಿ ತಾಳ್ಮೆಯಿಂದಲೇ ಕಾರ್ಯನಿರ್ವಹಿಸಿಕೊಂಡು ಉತ್ತಮ ಕೆಲಸ ಮಾಡುತ್ತಿದ್ದಾರೆ. ಬಾಕಿ ವೇತನ ಬಿಡುಗಡೆಯಾಗದ ಕಾರಣ ವೇತನ ನೀಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ವೇತನಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು. ತ್ವರಿತವಾಗಿ ವೇತನ ಬಿಡುಗಡೆ ಮಾಡಲು ಮನವಿ ಸಲ್ಲಿಸಲಾಗುವುದು’ ಎಂದು ಭರವಸೆ ನೀಡಿದರು.

ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು, ಪಿಡಿಒ, ಕಾರ್ಯದರ್ಶಿಗಳು ಹಾಗೂ ಇನ್ನಿತರ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.