ಎಚ್.ಕೆ. ಪಾಟೀಲ
ಕೊಪ್ಪಳ: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಯ ಅಗತ್ಯವಿಲ್ಲ ಎಂದು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಗಂಗಾವತಿ ತಾಲ್ಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಎನ್.ಟಿ.ಪಿ.ಸಿ. ಸಂಸ್ಥೆ ವಿಜಯಪುರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ವಿದ್ಯುತ್ ಸ್ಥಾವರ ಸ್ಥಾಪನೆಗೆ ಗುರುತಿಸಿದ ಸಂಭಾವ್ಯ ಸ್ಥಳಗಳಲ್ಲಿ ಪ್ರಾಥಮಿಕ ಅಧ್ಯಯನ ನಡೆಸಲು ಅನುಮತಿ ನೀಡುವಂತೆ ಕೋರಿದೆ. ಇದಕ್ಕೆ ನನ್ನ ಸಹಮತವಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟದಲ್ಲಿ ಕೆಲವು ಸಚಿವರು ಈ ಕುರಿತು ಚರ್ಚಿಸಿದ್ದೇವೆ. ಯಾರಿಗೂ ಇದಕ್ಕೆ ಒಪ್ಪಿಗೆಯಿಲ್ಲ. ಇದರ ಬದಲು ಸೌರ ಶಕ್ತಿ ಅಥವಾ ಪವನ ಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಮಾಡಲಿ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.