ಗಂಗಾವತಿ: ‘ಪೌಷ್ಟಿಕ ಆಹಾರ ಸೇವನೆಯಿಂದ ಸದೃಢ ಆರೋಗ್ಯ ಪಡೆಯಬಹುದು’ ಎಂದು ಅಂಗನವಾಡಿ ಕಾರ್ಯಕರ್ತೆ ಕವಿತಾ ಡೊಳ್ಳಿನ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಕೃಷ್ಣಾಪುರ ಡಗ್ಗಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆದ ಸೀಮಂತ ಹಾಗೂ ಅನ್ನ ಪ್ರಾಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಕೊರೊನಾ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಕ್ಕಳಿಗೆ, ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ವಿತರಿಸಿದೆ’ ಎಂದು ತಿಳಿಸಿದರು.
ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಅಂಬೇಶ್ವರಿ, ಆಶಾಕಾರ್ಯಕರ್ತೆ ಸುಚಿತ್ರ ಹಾಗೂ ಸಹಾಯಕಿ ಹೊಳಿಯಮ್ಮ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.