ADVERTISEMENT

ಹತ್ಯೆಯಾದ ದಲಿತ ಯುವತಿ ಮನೆಗೆ ಅಧಿಕಾರಿ ಭೇಟಿ: ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2024, 13:45 IST
Last Updated 5 ಸೆಪ್ಟೆಂಬರ್ 2024, 13:45 IST
ಗಂಗಾವತಿ ತಾಲ್ಲೂಕಿನ ಆಗೋಲಿ ಗ್ರಾಮದಲ್ಲಿ ಹತ್ಯೆಯಾದ ದಲಿತ ಯುವತಿ ಮನೆಗೆ ಸಮಾಜ ಕಲ್ಯಾಣ ಇಲಾಖೆ ಅಧಿ ಕಾರಿ ಬುಧವಾರ ಭೇಟಿ ನೀಡಿ, ಪ್ರಕರಣದ ಕುರಿತು ಮಾಹಿತಿ ಪಡೆದರು
ಗಂಗಾವತಿ ತಾಲ್ಲೂಕಿನ ಆಗೋಲಿ ಗ್ರಾಮದಲ್ಲಿ ಹತ್ಯೆಯಾದ ದಲಿತ ಯುವತಿ ಮನೆಗೆ ಸಮಾಜ ಕಲ್ಯಾಣ ಇಲಾಖೆ ಅಧಿ ಕಾರಿ ಬುಧವಾರ ಭೇಟಿ ನೀಡಿ, ಪ್ರಕರಣದ ಕುರಿತು ಮಾಹಿತಿ ಪಡೆದರು   

ಗಂಗಾವತಿ: ತಾಲ್ಲೂಕಿನ ವಿಠಲಾಪುರ ಗ್ರಾಮದಲ್ಲಿ ಈಚೆಗೆ ನಡೆದ ದಲಿತ ಯುವತಿಯ ಹತ್ಯೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಯುವ ಭೇಟಿ ನೀಡಿ, ಸಾಂತ್ವನ ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶರಣಪ್ಪ ಅವರು ಹತ್ಯೆಯಾದ ಯುವತಿಯ ತವರು ಮತ್ತು ಪತಿ ಮನೆಗೆ ಭೇಟಿ ನೀಡಿ, ‘ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾದ ಬಗ್ಗೆ, ಘಟನೆಗೆ ಕಾರಣಗಳು ತಿಳಿದು, ಈ ಬಗ್ಗೆ ಸೂಕ್ತ ರೀತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಪ್ರಕ್ರಿಯೆಗೆ ಮುಂದಾಗಿದ್ದಾರೆ.

ಹತ್ಯೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಸರ್ಕಾರ ಗಂಗಾವತಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಅದರನ್ವಯ ಎರಡು ಕುಟುಂಬಗಳ ನಿವಾಸಕ್ಕೆ ಮತ್ತು ಸಾರ್ವಜನಿಕರ ಅಭಿಪ್ರಾಯ ಪಡೆದು ವರದಿಗೆ ಸಲ್ಲಿಕೆಗೆ ಸಿದ್ದತೆ ನಡೆಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.