ADVERTISEMENT

ಗಂಗಾವತಿ: ಅಕ್ರಮ ಮರಳು ಅಡ್ಡೆ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 16:07 IST
Last Updated 23 ನವೆಂಬರ್ 2020, 16:07 IST
ಗಂಗಾವತಿ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಅಕ್ರಮ ಮರಳು ಅಡ್ಡೆ ಮೇಲೆ ಭಾನುವಾರ ತಡರಾತ್ರಿ ಅಧಿಕಾರಿಗಳು ದಾಳಿ ನಡೆಸಿದರು
ಗಂಗಾವತಿ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಅಕ್ರಮ ಮರಳು ಅಡ್ಡೆ ಮೇಲೆ ಭಾನುವಾರ ತಡರಾತ್ರಿ ಅಧಿಕಾರಿಗಳು ದಾಳಿ ನಡೆಸಿದರು   

ಗಂಗಾವತಿ: ತಾಲ್ಲೂಕಿನ ಹೆಬ್ಬಾಳ ಗ್ರಾಮದ ಬಳಿಯ ಅಕ್ರಮ ಮರಳು ಅಡ್ಡೆ ಮೇಲೆ ಭಾನುವಾರ ತಡರಾತ್ರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 100 ಮೆಟ್ರಿಕ್‌ ಟನ್‌ ಮರಳು ಹಾಗೂ ಟ್ರ್ಯಾಕ್ಟರ್‌ ವಶಪಡಿಸಿಕೊಂಡಿದ್ದಾರೆ.

ಅಧಿಕಾರಿಗಳು ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ರೂಪಾ, ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‌ಐ ದೊಡ್ಡಪ್ಪ ಜೆ, ಕಂದಾಯ ನಿರೀಕ್ಷಕ ಹನುಮಂತಪ್ಪ ಹಾಗೂ ಗ್ರಾಮ ಲೆಕ್ಕಾಧಿಕಾರಿ ರಾಜು ಭಜಂತ್ರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.