ADVERTISEMENT

ಬದು ನಿರ್ಮಾಣದಿಂದ ಅಂತರ್ಜಲ ಹೆಚ್ಚಳ 

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವ ಕೆ.ವಿ.ಕಾವ್ಯಾರಾಣಿ ಅಭಿಮತ

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 13:09 IST
Last Updated 21 ಜುಲೈ 2021, 13:09 IST
ಕನಕಗಿರಿ ತಾಲ್ಲೂಕಿನ ಚಿಕ್ಕ ಮಾದಿನಾಳ ಗ್ರಾಮದಲ್ಲಿ ನಡೆಯುತ್ತಿರುವ ಬದು ನಿರ್ಮಾಣದ ಕಾಮಗಾರಿ ಸ್ಥಳಕ್ಕೆ  ತಾ.ಪಂ. ಇಒ ಕಾವ್ಯಾರಾಣಿ ಮಂಗಳವಾರ ಭೇಟಿ ನೀಡಿದರು 
ಕನಕಗಿರಿ ತಾಲ್ಲೂಕಿನ ಚಿಕ್ಕ ಮಾದಿನಾಳ ಗ್ರಾಮದಲ್ಲಿ ನಡೆಯುತ್ತಿರುವ ಬದು ನಿರ್ಮಾಣದ ಕಾಮಗಾರಿ ಸ್ಥಳಕ್ಕೆ  ತಾ.ಪಂ. ಇಒ ಕಾವ್ಯಾರಾಣಿ ಮಂಗಳವಾರ ಭೇಟಿ ನೀಡಿದರು    

ಕನಕಗಿರಿ: ತಾಲ್ಲೂಕಿನ ಚಿಕ್ಕಮಾದಿನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿಕಾರ್ಯನಿರ್ವಹಣಾಧಿಕಾರಿ ಕೆ.ವಿ.ಕಾವ್ಯಾರಾಣಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾತನಾಡಿದ ಅವರು,‘ನರೇಗಾ ಯೋಜನೆಯಲ್ಲಿ ವೈಯಕ್ತಿಕ ಕಾಮಗಾರಿ ಕೈಗೆತ್ತಿಕೊಳ್ಳಲು ಅವಕಾಶ ಇದೆ. ರೈತರು ಜಮೀನುಗಳಲ್ಲಿ ಕಂದಕ ಬದು ನಿರ್ಮಾಣ ಮಾಡಿದರೆ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ’ ಎಂದು ತಿಳಿಸಿದರು.

ಬದು ನಿರ್ಮಾಣದಿಂದ ಕೊಳವೆಬಾವಿ ರಿಚಾರ್ಜ್ ಆಗಲು ಸಹಕಾರಿ ಆಗುತ್ತದೆ. ಬದುಗಳಲ್ಲಿ ತೇವಾಂಶ ಹೆಚ್ಚಾಗುವುದರಿಂದ ಲಾಭದಾಯಕ ತೋಟಗಾರಿಕೆ ಬೆಳೆಗಳನ್ನು ಬೆಳೆಯಬಹುದು ಎಂದರು.

ADVERTISEMENT

ಸಮುದಾಯ ಕಾಮಗಾರಿಗಳ ಜತೆಗೆ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ. ಈ ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಂಡು ರೈತರು ಅಭಿವೃದ್ಧಿ ಹೊಂದಬೇಕು ಎಂದು ಅವರು ಸಲಹೆ ನೀಡಿದರು.

ಗಂಗಾವತಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ.ಮೋಹನ್ ಮಾತನಾಡಿ,‘ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗೆ ನರೇಗಾ ಯೋಜನೆ ಸಹಕಾರಿಯಾಗಿದೆ. ಬದುಗಳಲ್ಲಿ ಅರಣ್ಯೀಕರಣ ಮಾಡಲು ಅವಕಾಶವಿದ್ದು, ರೈತರು ಬದುಗಳಲ್ಲಿ ಸಸಿಗಳನ್ನು ಬೆಳೆಸಲು ಮುಂದಾಗಬೇಕು’ ಎಂದು ತಿಳಿಸಿದರು. .

ತಾ.ಪಂ. ಸಹಾಯಕ ನಿರ್ದೇಶಕ ಚಂದ್ರಶೇಖರ ಕಂದಕೂರು, ತಾಂತ್ರಿಕ ಸಂಯೋಜಕ ಅಕ್ಷಯ್ ಅರ್ಲೂರು, ತಾಲ್ಲೂಕು ಐಇಸಿ ಸಂಯೋಜಕ ಬಾಳಪ್ಪ ತಾಳಕೇರಿ, ಎಂಐಎಸ್ ಸಂಯೋಜಕ ಚನ್ನಬಸಪ್ಪ, ಗ್ರಾ.ಪಂ. ಕಾರ್ಯದರ್ಶಿ ಯಂಕೋಬ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.