ಕೊಪ್ಪಳ: ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಸೋಮವಾರದ ತನಕ ನಡೆದ 14 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ₹2.60 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ.
ಸೋಮವಾರ ನಡೆದ ಸಮಾರೋಪ ಸಮಾರಂಭದಲ್ಲಿ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರು ಭಾಗಿಯಾಗಿ ಮೇಳದಲ್ಲಿ ಭಾಗವಹಿದ್ದ ರೈತರಿಗೆ ಪ್ರಮಾಣ ಪತ್ರ ವಿತರಿಸಿದರು.
‘ಒಂಬತ್ತನೇ ವರ್ಷದ ಮಾವು ಮೇಳದಲ್ಲಿ ಹಿಂದಿನ ಎಲ್ಲ ಮೇಳಕ್ಕಿಂತಲೂ ಹೆಚ್ಚು ವಹಿವಾಟು ನಡೆದಿದೆ. 280 ಟನ್‌ಗೂ ಹೆಚ್ಚು ವಿವಿಧ ತಳಿಯ ಮಾವುಗಳನ್ನು ರೈತರು ಮಾರಾಟ ಮಾಡಿದ್ದಾರೆ. ರೈತರಿಗಾಗಿ ಮಾವಿನ ಕುರಿತು ವಿವಿಧ ತಾಂತ್ರಿಕ ಮಾಹಿತಿ ನೀಡಲಾಗಿದೆ. ನೈಸರ್ಗಿಕವಾಗಿ ಮಾವು ಮಾಗಿಸುವ ಕುರಿತು ಎನ್ ರೈಪ್ ಎಂಬು ನೈಸರ್ಗಿಕ ಇಥರೆಲ್ ಪಂಚ್ ಹೋಲ್ ಪಾಕೆಟ್‌ಗಳನ್ನು ಪರಿಚಯಿಸಲಾಗಿದೆ’ ಎಂದು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಕೃಷ್ಣ ಉಕ್ಕುಂದ ಮಾಧ್ಯಮದವರಿಗೆ ಮಾಹಿತಿ ನೀಡಿದರು.
‘ಕೊಪ್ಪಳ ಕೇಸರ್ ಮತ್ತು ದಶಹರಿ ತಳಿಯ ಮಾವು ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು 200 ಟನ್‌ಗೂ ಹೆಚ್ಚು ಇದೇ ತಳಿಯ ಹಣ್ಣುಗಳು ಮಾರಾಟವಾಗಿದೆ’ ಎಂದು ಹೇಳಿದರು.
ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ.ಶಂಕ್ರಪ್ಪ ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.