ಅಳವಂಡಿ: ಸಮೀಪದ ಕವಲೂರು ಗ್ರಾಮದಲ್ಲಿ ಉಜ್ಜಯಿನಿ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಮಹೋತ್ಸವ ಮೇ 7ರಂದು ನಡೆಯಲಿದೆ.
ಗ್ರಾಮದ ಮಾರುತೇಶ್ವರ ದೇವಸ್ಥಾನದಿಂದ ಪ್ರಾರಂಭ ಆಗುವ ಅಲಂಕೃತ ಅಡ್ಡಪಲ್ಲಕ್ಕಿ ಮಹೋತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ದುರ್ಗಾದೇವಿ ದೇವಸ್ಥಾನವನ್ನು ತಲುಪಲಿದೆ. ಮಹಿಳೆಯರ ಕುಂಭ ಕಳಸ, ನಂದಿಕೋಲು ಮೆರವಣಿಗೆ ನಡೆಯಲಿದೆ.
ಸಂಜೆ ಜನ ಜಾಗೃತಿ ಧರ್ಮಸಭೆ ನಡೆಯಲಿದ್ದು, ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಅಳವಂಡಿಯ ಮರುಳಾರಾಧ್ಯ ಶಿವಾಚಾರ್ಯರು, ಮೈನಹಳ್ಳಿ ಬಿಕನಳ್ಳಿಯ ಸಿದ್ದೇಶ್ವರ ಶಿವಾಚಾರ್ಯರು, ಯಲಬುರ್ಗಾದ ಬಸವಲಿಂಗೇಶ್ವರ ಶಿವಾಚಾರ್ಯರು, ಕುಕನೂರಿನ ಮಹಾದೇವ ಸ್ವಾಮೀಜಿ, ಗುಳೇದಗುಡ್ಡದ ಒಪ್ಪತೇಶ್ವರ ಸ್ವಾಮೀಜಿ, ಡೋಣಿಯ ಹಾಲಸೋಮೇಶ್ವರ ಸ್ವಾಮೀಜಿ ನೇತೃತ್ವ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರದೀಪಗೌಡ ಮಾಲಿಪಾಟೀಲ, ಗುರುಮೂರ್ತಿ ಸ್ವಾಮಿ ಇನಾಮದಾರ, ಮನೋಹರ ದೇಸಾಯಿ, ಶರಣಪ್ಪ ಸಿದ್ನೆಕೊಪ್ಪ, ಸುರೇಶಬಾಬು ಸಿಂದೋಗಿ, ವೀರೇಶ ಕೂಗು ಹಾಗೂ ಇತರರು ಭಾಗವಹಿಸಲಿದ್ದಾರೆ.
ಜಾನಪದ ಸಂಗೀತ ಕಾರ್ಯಕ್ರಮ: ಕಲಾವಿದ ಗವಿಸಿದ್ದಯ್ಯ ಹಳ್ಳಿಕೇರಿಮಠ ಹಾಗೂ ಗುರು ಪಂಚಾಕ್ಷರಿ ಸಂಗೀತ ಸೇವಾ ಸಂಸ್ಥೆಯ ಸಂಗೀತ ಬಳಗದ ವತಿಯಿಂದ ಜಾನಪದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಗುಳೇದಗುಡ್ಡದ ಒಪ್ಪತೇಶ್ವರ ಸ್ವಾಮೀಜಿ ಅವರಿಂದ ಪ್ರವಚನ ಜರುಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.