ಅಮಾನತು
ಕಾರಟಗಿ (ಕೊಪ್ಪಳ ಜಿಲ್ಲೆ): ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ತಾಲ್ಲೂಕಿನ ಮೈಲಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಯ್ಯದ್ ಜಿಲಾನ್ ಬಾಷಾ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಆದೇಶ ಹೊರಡಿಸಿದ್ದಾರೆ.
ಮುಗಿದ ಕಾಮಗಾರಿಗೆ ಎನ್‌ಒಸಿ ನೀಡಲು ಗುತ್ತಿಗೆದಾರರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇಲಾಖಾ ವಿಚಾರಣೆ ಕಾಯ್ದಿರಿಸಿ ಜು.4ರಂದು ಅಮಾನತು ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.