ಕೊಪ್ಪಳ: ಇಲ್ಲಿನ ಜಿಲ್ಲಾ ಕ್ರೀಡಾಂಗಣದದ ಒಳಾಂಗಣ ಮೈದಾನದಲ್ಲಿ ಶುಕ್ರವಾರ ಆರಂಭವಾದ ಮೂರು ದಿನಗಳ ರಾಷ್ಟ್ರೀಯ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ 33 ರಾಜ್ಯಗಳ 1282 ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ.
ಭಾರತೀಯ ಪೆಂಕಾಕ್ ಸಿಲತ್ ಫೆಡರೇಷನ್, ರಾಜ್ಯ, ಗಂಗಾವತಿ, ಕೊಪ್ಪಳ ಮತ್ತು ಜಿಲ್ಲಾ ಅಥ್ಲೆಟಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜನೆಯಾಗಿರುವ ಕ್ರೀಡಾಕೂಟದ ಉದ್ಘಾಟನೆ ಶುಕ್ರವಾರ ನೆರವೇರಿತು.
ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ. ಶ್ರೀನಿವಾಸ ಗುಪ್ತಾ ಮಾತನಾಡಿ ‘ಜಿಲ್ಲೆಯಲ್ಲಿ ದೊಡ್ಡಮಟ್ಟದ ಕ್ರೀಡಾಕೂಟ ಆಯೋಜನೆಯಾಗಿದ್ದು ಖುಷಿಯಾಗಿದೆ’ ಎಂದರು. ರಾಜ್ಯ ಪೆಂಕಾಕ್ ಸಿಲತ್ ಸಂಸ್ಥೆಯ ಜಂಟಿ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ ಮಾತನಾಡಿ ‘ಅನೇಕರು ಸಹಕಾರದಿಂದ ಕ್ರೀಡಾಕೂಟ ಆಯೋಜಿಸಲು ಸಾಧ್ಯವಾಗಿದೆ’ ಎಂದು ಹೇಳಿದರು.
ಚಾಂಪಿಯನ್‌ಷಿಪ್‌ನ ಪಂದ್ಯಗಳು ಸಿಂಗಾ, ಮೆಕಾನ್, ಪ್ರಿ-ಟೀನ್, ಸಬ್ ಜೂನಿಯರ್ ಮತ್ತು ಜೂನಿಯರ್ ವಿಭಾಗದಲ್ಲಿ ನಡೆಯುತ್ತವೆ.
ಫೆಡರೇಷನ್ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷೆ ಫಲಿಯಾ ಥಾಮಸ್, ಖಜಾಂಚಿ ತಾರಿಖ್ ಅಹ್ಮದ್ ಜರ್ಗಾರ್, ಪಶ್ಚಿಮ ವಲಯದ ಅಧ್ಯಕ್ಷ ಅಲೆಕ್ಸಾಂಡರ್ ಥಾಮಸ್, ರಾಜ್ಯ ಸಂಸ್ಥೆ ಅಧ್ಯಕ್ಷ ಜಗನ್ನಾಥ ಅಲಂಪಳ್ಳಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಡ್ಡಿ ಶ್ರೀನಿವಾಸ, ಜಿಲ್ಲಾ ಪಂಚಾಯತ ಕೆಡಿಪಿ ಸದಸ್ಯ ದೊಡ್ಡಬಸನಗೌಡ ಬಯ್ಯಾಪೂರ, ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಸೋಮಶೇಖರ್ ಹಿಟ್ನಾಳ, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ, ಮುಖಂಡರಾದ ಹನುಮಸಾಗರ ಬಸವರಾಜ ಬಾಚಲಾಪೂರ, ಪ್ರಲ್ಹಾದರಾವ್ ದೇಸಾಯಿ, ಅಥ್ಲೆಟಿಕ್ ಅಸೋಸಿಯೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಬಸವ ಬಂಡಿಹಾಳ, ಶಿಕ್ಷಕ ಬಸವರಾಜ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.