ಗಂಗಾವತಿ: ‘ಮಾಸಿಕ ಪಿಂಚಣಿ ಪಡೆಯಲು ಹಿರಿಯ ನಾಗರಿಕರು ನಗರದ ಮುಖ್ಯ ಅಂಚೆ ಕಚೇರಿ ಎದುರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ನೂಕುನುಗ್ಗಲು ಉಂಟಾಗುತ್ತಿದೆ. ಕೋವಿಡ್ ಮಾರ್ಗಸೂಚಿ ಪಾಲಿಸುತ್ತಿಲ್ಲ. ಹಾಗಾಗಿ ತಾಲ್ಲೂಕು ಆಡಳಿತ ಮತ್ತು ಅಂಚೆ ಇಲಾಖೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು’ ಎಂದು ಕರವೇ ಪ್ರವೀಣಕುಮಾರ ಶೆಟ್ಟಿ ಬಣದ ಜಿಲ್ಲಾ ಘಟಕದ ಅಧ್ಯಕ್ಷ ಪಂಪಣ್ಣ ನಾಯಕ ತಿಳಿಸಿದ್ದಾರೆ.
ಹಿರಿಯ ನಾಗರಿಕರಿಗೆ ಸರ್ಕಾರ ಮಾಸಿಕ ಪಿಂಚಣಿ ನೀಡುತ್ತಿದೆ. ಹಣ ಅಂಚೆ ಕಚೇರಿಯ ಉಳಿತಾಯ ಖಾತೆಗೆ ಜಮಾ ಆಗುತ್ತಿದೆ. ಅದನ್ನು ಪಡೆಯಲು ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಕೂಡಲೇ ತಾಲ್ಲೂಕು ಆಡಳಿತ ಎಚ್ಚೆತ್ತುಕೊಂಡು ಪಿಂಚಣಿ ಹಣವನ್ನು ಮನೆಗೆ ತಲುಪಿಸುವ ವ್ಯವಸ್ಥೆ ಮಾಡಬೇಕು. ಅಂಚೆ ಕಚೇರಿಗೆ ಬರುವವರಿಗೆ ನಿಯಮ ಪಾಲನೆಗೆ ಸೂಚಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.