ADVERTISEMENT

ಪತ್ನಿ ಕೊಲೆ: 23 ವರ್ಷಗಳ ಬಳಿಕ ಪತ್ತೆಯಾಗಿದ್ದ ವ್ಯಕ್ತಿಗೆ ಜೀವಾವಧಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 15:43 IST
Last Updated 27 ಜೂನ್ 2025, 15:43 IST
<div class="paragraphs"><p>ಸದಾನಂದ ನಾಗಪ್ಪ ನಾಯ್ಕ</p></div>

ಸದಾನಂದ ನಾಗಪ್ಪ ನಾಯ್ಕ

   

ಗಂಗಾವತಿ: ಮೂರನೇ ಪತ್ನಿಯನ್ನು ಕೊಲೆ ಮಾಡಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಹಾಲದಾಳ ಗ್ರಾಮದ ಹನುಮಂತ ಹುಸೇನಪ್ಪ ಎಂಬ ನಿವೃತ್ತ ಸರ್ಕಾರಿ ನೌಕರನಿಗೆ ಇಲ್ಲಿನ ಒಂದನೆ ಹೆಚ್ಚುವರಿ ಜಿಲ್ಲಾ ಮತ್ತು ಸಷೆನ್ಸ್‌ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ ಅವರು ಜೀವಾವಧಿ ಶಿಕ್ಷೆ ಜೊತೆಗೆ ₹10 ಸಾವಿರ ದಂಡವನ್ನೂ ವಿಧಿಸಿದ್ದಾರೆ.

ADVERTISEMENT

ಹನುಮಂತ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಸರ್ಕಾರಿ ಬಸ್‌ನಲ್ಲಿ ಸಾಗಿಸಿ ತಲೆಮರೆಯಿಸಿಕೊಂಡಿದ್ದ. ನ್ಯಾಯಾಲಯದಲ್ಲಿ ವಿಚಾರಣೆ ನಡೆದಾಗ ಹನುಮಂತನ ಮೇಲಿದ್ದ ಆರೋಪ ಸಾಬೀತಾಗಿತ್ತು. ನ್ಯಾಯಾಲಯ ಇದನ್ನು ಆದೇಶಿಸಿ ಶಿಕ್ಷೆಯ ಪ್ರಮಾಣ ನಿರ್ಧರಿಸಬೇಕು ಎನ್ನುವಷ್ಟರಲ್ಲಿ ಪರಾರಿಯಾಗಿ ಎರಡು ತಿಂಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ. ಇದನ್ನು ನೋಡಿದ್ದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಎರಡು ದಿನಗಳ ಹಿಂದೆ ಪೊಲೀಸರು ಇಲ್ಲಿನ ನ್ಯಾಯಾಲಯಕ್ಕೆ ಒಪ್ಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.