ADVERTISEMENT

ಕೊಪ್ಪಳ: ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷನ ಬಂಧನ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 6:40 IST
Last Updated 22 ಸೆಪ್ಟೆಂಬರ್ 2022, 6:40 IST
ಅಬ್ದುಲ್ ಫಯಾಜ್
ಅಬ್ದುಲ್ ಫಯಾಜ್   

ಕೊಪ್ಪಳ: ಬೆಂಗಳೂರಿನ ಕೆ.ಜಿ. ಹಳ್ಳಿ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪಾಪ್ಯುಲರ್‌ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಫಯಾಜ್‌ ಎಂಬುವರನ್ನು ಗುರುವಾರ ಬೆಳಗಿನ ಜಾವ ಪೊಲೀಸರು ಬಂಧಿಸಿದ್ದಾರೆ.

‘ಗಂಗಾವತಿ ನಗರದಲ್ಲಿ ವಾಸವಾಗಿರುವ ಅಬ್ದುಲ್ ಫಯಾಜ್‌ನನ್ನು ಮನೆಗೆ ತೆರಳಿ ಬಂಧಿಸಲಾಗಿದ್ದು, ನಮ್ಮ ತಂಡ ಕೆ.ಜಿ. ಹಳ್ಳಿ ಪೊಲೀಸ್‌ ಠಾಣೆಗೆ ಆರೋಪಿಯನ್ನು ಕರೆದುಕೊಂಡು ಹೋಗಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಪ್ರಜಾವಾಣಿಗೆ ಖಚಿತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT