ಪ್ರಾತಿನಿಧಿಕ ಪತ್ರ
ಕುಷ್ಟಗಿ: ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಮಗ್ರ ಶಿಕ್ಷಣ ಅಭಿಯಾನದ ಪದನಿಮಿತ್ತ ಯೋಜನಾಧಿಕಾರಿಗಳ ಕಚೇರಿಯಿಂದ ಅಂಗವಿಕಲ ಮಕ್ಕಳಿಗೆ ಚಿಕಿತ್ಸೆ ನೀಡಲು ಫಿಜಿಯೋಥೆರಪಿಸ್ಟ್ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಹುವಿಧ ನ್ಯೂನತೆ, ಸೆರೆಬ್ರಲ್ ಪಾಲ್ಸಿ, ಹಾಗೂ ಇತರೆ ನ್ಯೂನತೆವುಳ್ಳ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಬೇಕಿದ್ದು ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿ ನಡೆಯಲಿದೆ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 5ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಹರು ಕ್ಷೇತ್ರ ಸಮನ್ವಯಾಧಿಕಾರಿಗಳು, ಬಿ.ಆರ್.ಸಿ. ಕೇಂದ್ರ ಗಾಂಧಿನಗರ, ಕುಷ್ಟಗಿ, ಕೊಪ್ಪಳ ಜಿಲ್ಲೆ, ಈ ವಿಳಾಸಕ್ಕೆ ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.