ADVERTISEMENT

ಕಾಮನ್‌ಸೆನ್ಸ್‌ ಇಲ್ಲದ ಪಿಎಂ: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 17 ಜನವರಿ 2023, 16:19 IST
Last Updated 17 ಜನವರಿ 2023, 16:19 IST
   

ಕೊಪ್ಪಳ: ‘ಜನರ ಕೈಯಲ್ಲಿ ಹಣವಿದ್ದಾಗ ಕೊಳ್ಳುವ ಶಕ್ತಿ ಹೆಚ್ಚುತ್ತದೆ. ಕೊಳ್ಳುವಿಕೆ ಏರಿಕೆಯಾದಾಗ ದೇಶದ ಜಿಡಿಪಿ ವೃದ್ಧಿಸುತ್ತದೆ ಎಂಬ ಕಾಮನ್‌ಸೆನ್ಸ್‌ ಪ್ರಧಾನಿಗೆ ಇಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಮಂಗಳವಾರ ನಡೆದ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಪ್ರಣಾಳಿಕೆಯಲ್ಲಿ ಘೋಷಿಸಿದ್ದನ್ನು ಈಡೇರಿಸದ ಬಿಜೆಪಿ ಸರ್ಕಾರ ಹಾಗೂ ನರೇಂದ್ರ ಮೋದಿ ವಚನ ಭ್ರಷ್ಟರು. ನಾವು ಹಿಂದೆ ಪ್ರಣಾಳಿಕೆಯಲ್ಲಿ ಘೋಷಿಸಿದ ಅಂಶಗಳನ್ನು ಅನುಷ್ಠಾನಗೊಳಿಸಿದ್ದೇವೆ’ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಾತನಾಡಿ,‘ನಾವು ನಿತ್ಯ ಕೇಳುವ ಒಂದು ಪ್ರಶ್ನೆಗೆ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಹಲವು ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, ಸಚಿವನಾಗಿ ಕೆಲಸ ಮಾಡಿದ ನನಗೆ ಸೇರಿ ಎಲ್ಲರಿಗೂ 200 ಯೂನಿಟ್‌ ಉಚಿತ ವಿದ್ಯುತ್‌ಗೆ ಹೇಗೆ ಹಣ ಹೊಂದಿಸಬೇಕು ಎಂಬುದು ಗೊತ್ತಿಲ್ಲವೇ’ ಎಂದು ಪ್ರಶ್ನಿಸಿದರು.

ADVERTISEMENT

ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಮಾತನಾಡಿ,‘ಪಿಎಸ್‌ಐ ನೇಮಕಾತಿಗೆ ಬ್ರೋಕರ್‌ ಆಗಿ ಕೆಲಸ ಮಾಡುವ, ಮೊಟ್ಟೆ ವಿತರಣೆಯಲ್ಲಿ ಲಂಚ ಪಡೆಯುವ ಶಾಸಕರು ಕೊಪ್ಪಳ ಜಿಲ್ಲೆಯಲ್ಲಿದ್ದಾರೆ’ ಎಂದು ಯಾರ ಹೆಸರನ್ನೂ ಉಲ್ಲೇಖಿಸದೇ ಶಾಸಕರಾದ ಬಸವರಾಜ ದಢೇಸೂಗೂರು ಹಾಗೂ ಪರಣ್ಣ ಮುನವಳ್ಳಿ ಅವರನ್ನು ತರಾಟೆಗೆ ತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.