
ಕೊಪ್ಪಳ: ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಪ್ರಸನ್ನ ಗಡಾದ ಅವರನ್ನು ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಸೋಮವಾರ ನೇಮಿಸಲಾಗಿದೆ.
ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ಆದೇಶ ಹೊರಡಿಸಿದ್ದು, ‘ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಪ್ರಸನ್ನ ಗಡಾದ ಅವರನ್ನು ನೇಮಿಸಲಾಗಿದೆ. ಸರ್ಕಾರದ ಮುಂದಿನ ಆದೇಶದ ತನಕ ನಾಮನಿರ್ದೇಶನ ಮಾಡಿ ಆದೇಶಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಉದ್ಯಮಿ ಶ್ರೀನಿವಾಸ ಗುಪ್ತಾ ಅವರು ಪ್ರಾಧಿಕಾರದ ಅಧ್ಯಕ್ಷರಾಗಿ 2024ರ ಅಕ್ಟೋಬರ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವಧಿ ಪೂರ್ಣಗೊಳ್ಳುವ ಮೊದಲೇ ಗುಪ್ತಾ ಅವರ ಬದಲು ಈಗ ಪ್ರಸನ್ನ ಗಡಾದ ಅವರನ್ನು ನೇಮಿಸಲಾಗಿದೆ. ಪ್ರಸನ್ನು ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು.
‘ಪಕ್ಷದ ಬೆಳವಣಿಗೆಗಾಗಿ ಸಾಕಷ್ಟು ಕೆಲಸ ಮಾಡಿದ್ದನ್ನು ಗುರುತಿಸಿ ಪಕ್ಷದ ಹಿರಿಯರು ಅವಕಾಶ ನೀಡಿದ್ದಾರೆ. ಶಾಸಕರು ದೆಹಲಿ ಪ್ರವಾಸದಲ್ಲಿದ್ದು ಬಂದ ಬಳಿಕ ಅವರೊಂದಿಗೆ ಚರ್ಚಿಸಿ ಅಧಿಕಾರ ಸ್ವೀಕಾರ ದಿನಾಂಕ ನಿಗದಿಪಡಿಸಲಾಗುವುದು. ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಏನು ಕಾರ್ಯಯೋಜನೆ ಅನುಷ್ಠಾನಕ್ಕೆ ತರಲು ಸಾಧ್ಯವಿದೆಯೊ ಅದನ್ನು ಮಾಡುವೆ’ ಎಂದು ಪ್ರಸನ್ನ ಗಡಾದ ಹೇಳಿದರು.
ಪ್ರಸನ್ನ ಗಡಾದ, ಜಿಲ್ಲಾ ಪಂಚಾಯಿತಿ ಸದಸ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.