ADVERTISEMENT

ಜಲಾಶಯಕ್ಕೆ ಸಾವಿರ ಕೋಟಿ ಅನುದಾನ: ಹರ್ಷ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2022, 10:36 IST
Last Updated 7 ಮಾರ್ಚ್ 2022, 10:36 IST
ಕನಕಗಿರಿಯ ಸಮೀಪದ ನವಲಿ ಜಲಾಶಯಕ್ಕೆ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ ಹಿನ್ನೆಲೆಯಲ್ಲಿ ವಾಲ್ಮೀಕಿ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು
ಕನಕಗಿರಿಯ ಸಮೀಪದ ನವಲಿ ಜಲಾಶಯಕ್ಕೆ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ ಹಿನ್ನೆಲೆಯಲ್ಲಿ ವಾಲ್ಮೀಕಿ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು   

ಕನಕಗಿರಿ: ತಾಲ್ಲೂಕಿನ ನವಲಿ ಹತ್ತಿರ ನಿರ್ಮಾಣ ಮಾಡಲು ಯೋಜಿಸಿರುವ ಸಮಾನಾಂತರ ಜಲಾಶಯಕ್ಕೆ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ನೀಡಿರುವುದು ಸಂತಸದ ವಿಷಯವಾಗಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಕಾಶ ಹಾದಿಮನಿ, ಯುವ ಮುಂದಾಳು ಚೆನ್ನಬಸವ ತೆಗ್ಗಿನಮನಿ ತಿಳಿಸಿದರು.

ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಶುಕ್ರವಾರ ರಾತ್ರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಸಕ ಬಸವರಾಜ ದಢೇಸೂಗೂರು ಅವರು ಅಭಿವೃದ್ಧಿ ಚಿಂತಕರಾಗಿದ್ದು ರೈತರ ಪರ ಕಾಳಜಿ ಹೊಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ನಿರಂತರ ಒತ್ತಡ ಹಾಕಿ ಅನುದಾನ ಮೀಸಲಿಡಿಸಿದ್ದಾರೆ ಎಂದು ತಿಳಿಸಿದರು.

ADVERTISEMENT

ಸಮಾನಾಂತರ ಜಲಾಶಯದಿಂದ ಈ ಭಾಗ ನೀರಾವರಿ ಆಗಲಿದೆ ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಸದಸ್ಯ ಹನುಮಂತಪ್ಪ ಬಸರಿಗಿಡದ, ಶೇಷಪ್ಪ ಪೂಜಾರ, ನಾಮ ನಿರ್ದೇಶಕ ಸದಸ್ಯ ರಾಚಪ್ಪ ಬ್ಯಾಳಿ, ಪ್ರಮುಖರಾದ ಶಿವಾನಂದ ವಂಕಲಕುಂಟಿ, ಬಸವರಾಜ ಕಂಪ್ಲಿ ಹಾಗೂ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.