ಕೊಪ್ಪಳ: ತಾಲ್ಲೂಕಿನ ಜಿನ್ನಾಪುರ ತಾಂಡದ ದೇವಸ್ಥಾನದಲ್ಲಿ ನಿಗದಿಯಾಗಿದ್ದ ಐದು ಜನ ಬಾಲಕಿಯರ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಡೆದಿದ್ದಾರೆ. ಅವರ ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.
ಏ. 4ರಂದು ಜಿನ್ನಾಪುರ ತಾಂಡಾದಲ್ಲಿ ಮರಿಯಮ್ಮದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿವಾಹ ನಿಶ್ಚಯಿಸಲಾಗಿತ್ತು. ಈ ಬಗ್ಗೆ ಮಕ್ಕಳ ಸಹಾಯವಾಣಿ 1098/112 ಕರೆ ಬಂದ ಹಿನ್ನೆಲೆಯಲ್ಲಿ ಜಿನ್ನಾಪುರ ತಾಂಡಾಕ್ಕೆ ಅಂಗನವಾಡಿ ಮೇಲ್ವಿಚಾರಕಿ ಮಂಜುಳಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರತಿಭಾ ಕಾಶಿಮಠ, ಶಿವಲೀಲಾ ವನ್ನೂರು ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ದಾಖಲೆಗಳನ್ನು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.